March 30, 2026
Monday, March 30, 2026
spot_img

IPL 2026 | ಸೋಲಿನ ಸರಪಳಿಗೆ ಬ್ರೇಕ್: ಕೆಕೆಆರ್ ವಿರುದ್ಧ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2026ರ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಅಭಿಮಾನಿಗಳಿಗೆ ರೋಚಕ ಪಂದ್ಯವನ್ನು ಉಣಬಡಿಸಿ ಐತಿಹಾಸಿಕ ಗೆಲುವು ಸಾಧಿಸಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಈ ಹೈ-ಸ್ಕೋರಿಂಗ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ನೀಡಿದ 221 ರನ್‌ಗಳ ಬೃಹತ್ ಗುರಿಯನ್ನು ಮುಂಬೈ 19.1 ಓವರ್‌ಗಳಲ್ಲಿ ಬೆನ್ನಟ್ಟಿ ಗೆದ್ದು ಹೊಸ ದಾಖಲೆ ಬರೆದಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಕೆಕೆಆರ್, 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 220 ರನ್ ಕಲೆಹಾಕಿತು. ನಾಯಕ ಅಜಿಂಕ್ಯ ರಹಾನೆ ಅದ್ಭುತವಾಗಿ ಆಡುತ್ತಾ 67 ರನ್ ಗಳಿಸಿದರೆ, ಯುವ ಬ್ಯಾಟರ್ ಅಂಗ್‌ಕ್ರಿಶ್ ರಘುವಂಶಿ 51 ರನ್‌ಗಳ ಚುರುಕಿನ ಇನ್ನಿಂಗ್ಸ್ ಮೂಲಕ ತಂಡದ ಮೊತ್ತವನ್ನು ಬಲಪಡಿಸಿದರು. ಆರಂಭಿಕ ಆಟಗಾರ ಫಿನ್ ಅಲೆನ್ 37 ರನ್‌ಗಳ ವೇಗದ ಕೊಡುಗೆ ನೀಡಿದರು. ಮುಂಬೈ ಪರ ಶಾರ್ದೂಲ್ ಠಾಕೂರ್ 3 ವಿಕೆಟ್ ಪಡೆದು ಗಮನ ಸೆಳೆದರು.

ಇದನ್ನೂ ಓದಿ:

ಬೃಹತ್ ಗುರಿ ಬೆನ್ನಟ್ಟಿದ ಮುಂಬೈಗೆ ಆರಂಭಿಕ ಜೋಡಿ ರೋಹಿತ್ ಶರ್ಮಾ ಮತ್ತು ರಯಾನ್ ರಿಕಲ್ಟನ್ ಭರ್ಜರಿ ನೆಲೆ ನೀಡಿದರು. ರೋಹಿತ್ 78 ರನ್‌ಗಳ ಸಿಡಿಲಬ್ಬರದ ಇನ್ನಿಂಗ್ಸ್ ಆಡಿದರೆ, ರಿಕಲ್ಟನ್ 81 ರನ್‌ಗಳ ಅಮೂಲ್ಯ ಕೊಡುಗೆ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 148 ರನ್‌ಗಳ ಭಾರೀ ಜೊತೆಯಾಟ ನಿರ್ಮಿಸಿ ಪಂದ್ಯದ ದಿಕ್ಕೇ ಬದಲಿಸಿತು.

ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತನ್ನ ಮೊದಲ ಪಂದ್ಯಗಳ ಸೋಲಿನ ಸರಣಿಗೂ ಅಂತ್ಯ ಹಾಡಿದೆ. ಹಲವು ಆವೃತ್ತಿಗಳ ಬಳಿಕ ಆರಂಭಿಕ ಪಂದ್ಯದಲ್ಲೇ ಜಯ ದಾಖಲಿಸಿದ ಮುಂಬೈ, ಈ ಸೀಸನ್‌ಗೆ ಆತ್ಮವಿಶ್ವಾಸದ ಆರಂಭ ಪಡೆದುಕೊಂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !