July 23, 2026
Thursday, July 23, 2026
spot_img

ದೇವನಹಳ್ಳಿಯಲ್ಲಿ ರಾಮನವಮಿ ಪ್ರಸಾದ ಸೇವಿಸಿ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇವನಹಳ್ಳಿಯಲ್ಲಿ ಶ್ರೀರಾಮನವಮಿ ಹಬ್ಬದ ಅಂಗವಾಗಿ ಪ್ರಸಾದ ವಿತರಣೆ ಮಾಡಲಾಗಿದ್ದು, ಇದನ್ನು ಸೇವಿಸಿದ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

ಬೆಟ್ಟೇನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ವಿತರಿಸಿದ ಪ್ರಸಾದ ಸೇವಿಸಿ ಗ್ರಾಮಸ್ಥರಿಗೆ ಹೊಟ್ಟೆನೋವು, ವಾಂತಿ-ಬೇಧಿಯಾಗಿದೆ. ತಕ್ಷಣ ಜನ ಆಸ್ಪತ್ರೆಗೆ ಹೋಗಿದ್ದಾರೆ.

ತೀವ್ರವಾಗಿ ಅಸ್ವಸ್ಥಗೊಂಡವರನ್ನು ಅರದೇಶನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 200ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದಿದ್ದಾರೆ.ಬಹುತೇಕರು ಚೇತರಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಸದ್ಯ ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ.

ಅಡುಗೆಯ ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಿದ್ದು, ಯಾವುದರಿಂದ ಫುಡ್‌ ಪಾಯಿಸನ್‌ ಆಗಿದೆ ಎಂದು ರಿಪೋರ್ಟ್‌ ನಂತರ ತಿಳಿಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !