June 1, 2026
Monday, June 1, 2026
spot_img

ಕಾಲೇಜಿಗೆ ಹೊರಟ ಪ್ರೊಫೆಸರ್‌ ಅಡಿಕೆ ತೋಟದಲ್ಲಿ ಶವವಾಗಿ ಪತ್ತೆ, ಇದು ಸಹಜ ಸಾವಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಿವಮೊಗ್ಗದ ಹೊಳೆಹೊನ್ನೂರು ಸಮೀಪದ ಹನುಮಂತಾಪುರದ ಪ್ರೊಫೆಸರ್‌ ಒಬ್ಬರು ಅಡಿಕೆ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ಪ್ರೊಫೆಸರ್‌ ಆಗಿ ಕೆಲಸ ಮಾಡುತ್ತಿದ್ದ ಸುರೇಶ್‌ ಕುಮಾರ್‌ ಮೃತದೇಹ ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಶನಿವಾರ ಮನೆಯಿಂದ ಹೊರಟ ಸುರೇಶ್‌ ಕುಮಾರ್‌ ಮದುವೆಗೆ ಹೋಗ್ತಿದ್ದೇನೆ ಎಂದು ಹೇಳಿದ್ದಾರೆ. ಆದರೆ ಭಾನುವಾರ ಬೆಳಗ್ಗೆ ಅವರದ್ದೇ ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಅಕ್ಕಪಕ್ಕದ ತೋಟದವರು ಬೆಂಕಿಯಲ್ಲಿ ದೇಹ ಉರಿಯುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಮೃತದೇಹ ಭಾಗಶಃ ಸುಟ್ಟು ಕರಕಲಾಗಿತ್ತು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲೇ ಮೃತ ವ್ಯಕ್ತಿಯ ಬೈಕ್ ಮತ್ತು ಬ್ಯಾಗ್’ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !