March 30, 2026
Monday, March 30, 2026
spot_img

ಬಿಹಾರ ರಾಜಕೀಯದಲ್ಲಿ ಬಿಗ್ ಅಪ್ಡೇಟ್: ಎಂಎಲ್‌ಸಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ವಿಧಾನ ಪರಿಷತ್ (ಎಂಎಲ್‌ಸಿ) ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸಂವಿಧಾನಾತ್ಮಕ ನಿಯಮದಂತೆ ಅವರು ಈ ಕ್ರಮ ಕೈಗೊಂಡಿದ್ದಾರೆ.

ನಿಯಮದ ಪ್ರಕಾರ, ವಿಧಾನ ಪರಿಷತ್ ಸದಸ್ಯರು ರಾಜ್ಯಸಭೆಗೆ ಆಯ್ಕೆಯಾದ 14 ದಿನಗಳೊಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ಇದೇ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಇಂದು ಎಂಎಲ್‌ಸಿ ಸ್ಥಾನ ತ್ಯಜಿಸಿದ್ದಾರೆ. ಆದರೆ ಅವರು ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂಬ ಮಾಹಿತಿ ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ:

ಇದರ ನಡುವೆ ಜನತಾದಳ (ಯುನೈಟೆಡ್) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೂ ನಿತೀಶ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದ ಕಾರಣ, ಅವರು ಸ್ಪರ್ಧೆಯಿಲ್ಲದೆ ಆಯ್ಕೆಯಾಗಿರುವುದಾಗಿ ಜೆಡಿಯು ನಾಯಕರು ತಿಳಿಸಿದ್ದಾರೆ.

ಇದೇ ವೇಳೆ ಬಿಹಾರದಲ್ಲಿ ಮುಂದಿನ ರಾಜಕೀಯ ಬೆಳವಣಿಗೆಗಳತ್ತ ಎಲ್ಲರ ಗಮನ ಸೆಳೆದಿದೆ. ಮುಖ್ಯಮಂತ್ರಿ ಸ್ಥಾನದಲ್ಲಿ ಅವರು ಎಷ್ಟು ಕಾಲ ಮುಂದುವರಿಯುತ್ತಾರೆ ಎಂಬ ಕುತೂಹಲವೂ ರಾಜಕೀಯ ವಲಯದಲ್ಲಿ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಬಿಹಾರ ಸರ್ಕಾರ ಮತ್ತು ಜೆಡಿಯು ಪಕ್ಷದ ಒಳರಾಜಕೀಯದಲ್ಲಿ ಈ ಬೆಳವಣಿಗೆ ಮಹತ್ವದ ಪರಿಣಾಮ ಬೀರುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !