March 30, 2026
Monday, March 30, 2026
spot_img

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ನಿಧನ: ಚಿತ್ರರಂಗದ ಗಣ್ಯರಿಂದ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ವಯೋಸಹಜ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕುಟುಂಬ ಮೂಲಗಳ ಪ್ರಕಾರ, ಅವರು ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ಸ್ವರ್ಣಲತಾ ಅವರಿಗೆ 86 ವರ್ಷ ವಯಸ್ಸಾಗಿತ್ತು. ಬೆಂಗಳೂರಿನಲ್ಲೇ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದ್ದು, ಕುಟುಂಬದವರು ಹಾಗೂ ಆಪ್ತರು ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:

ಈ ಸುದ್ದಿ ತಿಳಿಯುತ್ತಿದ್ದಂತೆ ಕನ್ನಡ, ತೆಲುಗು ಹಾಗೂ ತಮಿಳು ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ತಮ್ಮ ತಾಯಿಯ ಬಗ್ಗೆ ಪ್ರಕಾಶ್ ರಾಜ್ ಹಲವು ಸಂದರ್ಭಗಳಲ್ಲಿ ಭಾವುಕರಾಗಿ ಮಾತನಾಡಿದ್ದರು. ಜೀವನದ ಕಷ್ಟಗಳನ್ನು ಎದುರಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದ ತಾಯಿಯ ತ್ಯಾಗವನ್ನು ಅವರು ಹಲವು ಬಾರಿ ಸ್ಮರಿಸಿದ್ದರು. ಕುಟುಂಬವನ್ನು ಕಟ್ಟಿಕೊಟ್ಟ ಶಕ್ತಿಯಾಗಿ ತಾಯಿಯನ್ನು ಅವರು ಸದಾ ಗೌರವಿಸುತ್ತಿದ್ದರು ಎಂಬುದು ಅವರ ಮಾತುಗಳಿಂದಲೇ ಸ್ಪಷ್ಟವಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !