March 30, 2026
Monday, March 30, 2026
spot_img

ಭದ್ರಾವತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್: 35 ಪ್ರಯಾಣಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಕಾಗೇಹಳ್ಳದ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಸೇತುವೆಯಿಂದ ಕೆಳಗೆ ಬಿದ್ದು, ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಮಧ್ಯಾಹ್ನ ಸುಮಾರು 12:30ರ ಸಮಯದಲ್ಲಿ ದಾವಣಗೆರೆಯಿಂದ ಭದ್ರಾವತಿಗೆ ಬರುತ್ತಿದ್ದ ಬಸ್, ಕಾಗೇಹಳ್ಳದ ಸೇತುವೆ ಮೇಲೆ ಚಲಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಸ್‌ ನಲ್ಲಿ ಚಾಲಕ‌, ಕಂಡಕ್ಟರ್‌ ಸೇರಿ ಒಟ್ಟು 35 ಜನ ಪ್ರಯಾಣಿಕರು ಇದ್ದರು. ಬಸ್ ಹಳ್ಳಕ್ಕೆ ಬಿದ್ದ ರಭಸಕ್ಕೆ ಮೂವರಿಗೆ ಕೈ ಮತ್ತು ಕಾಲುಗಳು ಮುರಿದಿದೆ. ಉಳಿದವರೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಭದ್ರಾವತಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !