March 31, 2026
Tuesday, March 31, 2026
spot_img

WEATHER | ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆ ಸಾಧ್ಯತೆ, ಈ ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಲೇ ಇದೆ. ಇಂದು ಕೂಡ ಮಳೆ ಮುಂದುವರಿಯಲಿದ್ದು, ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರ್ಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ,ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !