March 31, 2026
Tuesday, March 31, 2026
spot_img

ಇರಾನ್‌ ವಿಮಾನ ನಿಲ್ದಾಣದ ಮೇಲೆ ಅಮೆರಿಕ ಏರ್‌ಸ್ಟ್ರೈಕ್‌: ಭಾರತಕ್ಕೆ ಬರಬೇಕಿದ್ದ ನೆರವು ವಿಮಾನಕ್ಕೆ ಹಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆ ಇರಾನ್‌ನ ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ನಡೆಸಿದ ವಾಯುದಾಳಿ ಹೊಸ ಆತಂಕಕ್ಕೆ ಕಾರಣವಾಗಿದೆ. ಈ ದಾಳಿಯಲ್ಲಿ ಭಾರತಕ್ಕೆ ಮಾನವೀಯ ನೆರವು ಕಾರ್ಯಕ್ಕಾಗಿ ತೆರಳಬೇಕಿದ್ದ ಮಹಾನ್ ಏರ್ ವಿಮಾನಕ್ಕೆ ಹಾನಿಯಾಗಿದೆ ಎಂದು ಇರಾನ್ ಅಧಿಕಾರಿಗಳು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಈ ವಿಮಾನವು ಔಷಧಿಗಳು ಮತ್ತು ಇತರ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಲು ನವದೆಹಲಿಗೆ ಬರಲು ಸಿದ್ಧವಾಗಿತ್ತು. ಆದರೆ ಅದಕ್ಕೂ ಮುನ್ನ ಮಶಾದ್ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಲ್ಲಿ ವಿಮಾನಕ್ಕೆ ಹಾನಿಯಾಗಿದೆ. ಇದರಿಂದ ಭಾರತ-ಇರಾನ್ ನಡುವೆ ನಡೆಯುತ್ತಿದ್ದ ಮಾನವೀಯ ನೆರವು ಕಾರ್ಯಾಚರಣೆಗೆ ತಾತ್ಕಾಲಿಕ ಅಡ್ಡಿಯಾಗಿದೆ.

ಇದನ್ನೂ ಓದಿ:

ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ನಾಗರಿಕ ಹಾಗೂ ನೆರವು ಸಂಬಂಧಿತ ವಿಮಾನವನ್ನು ಗುರಿಯಾಗಿಸುವುದು ಅಂತಾರಾಷ್ಟ್ರೀಯ ಕಾನೂನುಗಳ ಉಲ್ಲಂಘನೆ ಎಂದು ಆರೋಪಿಸಿದೆ. ಅಮೆರಿಕದ ಪರವಾಗಿ ಈ ಬಗ್ಗೆ ತಕ್ಷಣದ ಅಧಿಕೃತ ಪ್ರತಿಕ್ರಿಯೆ ಹೊರಬಿದ್ದಿಲ್ಲ.

ಇತ್ತೀಚೆಗೆ ಭಾರತವು ಇರಾನ್‌ಗೆ ಔಷಧಿ ಹಾಗೂ ವೈದ್ಯಕೀಯ ನೆರವು ಕಳುಹಿಸಿತ್ತು. ಮಾರ್ಚ್ ತಿಂಗಳಲ್ಲಿ ಕಳುಹಿಸಲಾದ ನೆರವು ಸರಕನ್ನು ಇರಾನಿನ ರೆಡ್ ಕ್ರೆಸೆಂಟ್ ಸೊಸೈಟಿ ಸ್ವೀಕರಿಸಿತ್ತು. ಈ ಬೆಳವಣಿಗೆ ಎರಡು ದೇಶಗಳ ನಡುವಿನ ನೆರವು ಸಹಕಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಘಟನೆಯಲ್ಲಿ ಸಾವು-ನೋವುಗಳ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !