March 31, 2026
Tuesday, March 31, 2026
spot_img

ಮಳೆ..ಮಳೆ..ಮಳೆ.. ಮುಂದಿನ 24 ಗಂಟೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ: 15 ರಾಜ್ಯಗಳಿಗೆ IMD ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಾದ್ಯಂತ ಹವಾಮಾನದಲ್ಲಿ ಏಕಾಏಕಿ ಬದಲಾವಣೆ ಕಂಡುಬಂದಿದ್ದು, ಹಲವೆಡೆ ಮಳೆ ಮತ್ತು ಇನ್ನೂ ಕೆಲ ಭಾಗಗಳಲ್ಲಿ ಉಷ್ಣತೆಯ ತೀವ್ರತೆ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ.

ಈ ನಡುವೆ ಭಾರತ ಹವಾಮಾನ ಇಲಾಖೆ (IMD) ಮುಂದಿನ 24 ಗಂಟೆಗಳಲ್ಲಿ 15 ರಾಜ್ಯಗಳಲ್ಲಿ ಗುಡುಗು ಸಹಿತ ಮಳೆ, ಬಿರುಗಾಳಿ ಮತ್ತು ಕೆಲವು ಕಡೆ ಆಲಿಕಲ್ಲು ಮಳೆಯ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ:

ಐಎಂಡಿ ಪ್ರಕಾರ, ಸಕ್ರಿಯ ಪಾಶ್ಚಿಮಾತ್ಯ ಅಲೆಗಳ ಪರಿಣಾಮದಿಂದ ಉತ್ತರ, ಪೂರ್ವ, ಮಧ್ಯ ಮತ್ತು ದಕ್ಷಿಣ ಭಾರತದ ಅನೇಕ ರಾಜ್ಯಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗಿದೆ. ಪಶ್ಚಿಮ ಬಂಗಾಳದ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮಧ್ಯಪ್ರದೇಶ, ಜಾರ್ಖಂಡ್, ರಾಜಸ್ಥಾನ ಹಾಗೂ ಹಿಮಾಚಲ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ದಕ್ಷಿಣ ಭಾರತದಲ್ಲೂ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆ ಸಾಧ್ಯತೆ ಇದೆ. ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !