September 29, 2026
Tuesday, September 29, 2026
spot_img

ಚುನಾವಣಾ ಪ್ರಚಾರದ ಭರದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ನಟ ವಿಜಯ್ ವಿರುದ್ಧ ಕೇಸ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಚುನಾವಣಾ ಕಣ ಕಾವೇರುತ್ತಿದ್ದು, ನಟ ವಿಜಯ್ ಪಕ್ಷ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಇದರ ನಡುವೆ ಮಾದರಿ ನೀತಿ ಸಂಹಿತೆ ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಕೇಸ್ ದಾಖಲಾಗಿದೆ.

ಚೆನ್ನೈನ ಪೆರಂಬೂರು ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಟಿವಿಕೆ ಮುಖ್ಯಸ್ಥ ವಿಜಯ್ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಾವಿರಾರು ಕಾರ್ಯಕರ್ತರು ಜಮಾಯಿಸಿದ್ದರು. ಜೊತೆಗೆ ವಾಹನಗಳ ಮೂಲಕ ಹಿಂಬಾಲಿಸಿದ್ದರು. ಈ ವೇಳೆ ಎಂಸಿಸಿ ನಿಯಮಗಳನ್ನು ಉಲ್ಲಂಘಿಸಿದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ನಟ ವಿಜಯ್ ಮತ್ತು ಟಿವಿಕೆ ಪಕ್ಷದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ಚುನಾವಣಾ ಪ್ರಚಾರ ವೇಳೆ ಅಧಿಕಾರಿಗಳು ಅನುಮತಿಸಿದ ಸಮಯಕ್ಕಿಂತ ಮೊದಲೇ ಕಾರ್ಯಕರ್ತರು ಒಟ್ಟುಗೂಡಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂಬ ಆರೋಪ ಕೇಳಿಬಂದ್ದಿದ್ದು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ತಿಳಿಸಲಾಗಿದೆ.

Must Read