ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್‌ನಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. BAMS ವ್ಯಾಸಂಗ ಮಾಡುತ್ತಿದ್ದ 23 ವರ್ಷದ ವಿದ್ಯಾರ್ಥಿನಿ ನಿಖಿತಾ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ವಿದ್ಯಾರ್ಥಿನಿ ತಮ್ಮ ಅಧ್ಯಾಪಕರೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ಸುಳ್ಳು ಅಪಪ್ರಚಾರ ಕೆಲ ದಿನಗಳಿಂದ ಹರಿದಾಡುತ್ತಿತ್ತು ಎನ್ನಲಾಗಿದೆ. ಇದೇ ಕಾರಣದಿಂದ ಮಾನಸಿಕವಾಗಿ ನೊಂದಿದ್ದ ನಿಖಿತಾ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಇದನ್ನೂ ಓದಿ:
ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ಅಧ್ಯಾಪಕ ಡಾ. ರಾಜು, ಅವರ ಪತ್ನಿ ನಿಶಾ ಹಾಗೂ ಕೆಲ ವಿದ್ಯಾರ್ಥಿನಿಯರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆ ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ತಂದಿದೆ.
ಕುಟುಂಬ ಸದಸ್ಯರ ದೂರಿನ ಮೇರೆಗೆ ಸಂಬಂಧಪಟ್ಟವರ ವಿರುದ್ಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಪ್ರೇರಣೆ ಮತ್ತು ಮಾನಸಿಕ ಕಿರುಕುಳದ ಆರೋಪಗಳಡಿ ತನಿಖೆ ಮುಂದುವರಿದಿದೆ. ಪೊಲೀಸರು ಡೆತ್ ನೋಟ್, ಮೊಬೈಲ್ ಮಾಹಿತಿ ಹಾಗೂ ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ವಿಚಾರಣೆ ನಡೆಸುತ್ತಿದ್ದಾರೆ.



