ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ ಉತ್ಸಾಹ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವೇಳೆಯಲ್ಲೇ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರ ಒಂದು ಹೇಳಿಕೆ ಅಭಿಮಾನಿಗಳ ಗಮನ ಸೆಳೆದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಬಗ್ಗೆ ಅವರು ಹಂಚಿಕೊಂಡ ಹಳೆಯ ನೆನಪುಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿವೆ.
ತಮ್ಮ ಆಟದ ದಿನಗಳಲ್ಲಿ RCB ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಗಳನ್ನು “ಫ್ರೀ ಪಾಯಿಂಟ್ಸ್” ಎಂದು ಪರಿಗಣಿಸುತ್ತಿದ್ದೆವು ಎಂದು ಸೆಹ್ವಾಗ್ ಹೇಳಿದ್ದಾರೆ. ಅಂದರೆ ಈ ತಂಡಗಳ ವಿರುದ್ಧ ಗೆಲುವು ಸಾಧಿಸುವ ನಿರೀಕ್ಷೆ ಹೆಚ್ಚು ಇರುತ್ತಿತ್ತು ಮತ್ತು ಆ ಎರಡು ಅಂಕಗಳನ್ನು ಕಳೆದುಕೊಳ್ಳಬಾರದು ಎಂಬ ಒತ್ತಡ ತಂಡದ ಮೇಲೆ ಇರುತ್ತಿತ್ತೆಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:
ಇದೇ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಗಳ ಬಗ್ಗೆ ಮಾತನಾಡಿದ ಅವರು, ಆ ತಂಡ ಬಲಿಷ್ಠವಾಗಿದ್ದರಿಂದ ಗೆದ್ದರೆ ಅದನ್ನು ಹೆಚ್ಚುವರಿ ಸಾಧನೆ ಎಂದು ಭಾವಿಸುತ್ತಿದ್ದೆವು ಎಂದು ತಿಳಿಸಿದ್ದಾರೆ.
ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಆರ್‌ಸಿಬಿ ಬಲಿಷ್ಠ ತಂಡವಾಗಿ ಹೊರಹೊಮ್ಮಿದ್ದು, ಕಳೆದ ಸೀಸನ್‌ನ ಚಾಂಪಿಯನ್ ಪಟ್ಟದೊಂದಿಗೆ ಈ ಬಾರಿಯೂ ಉತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಸೆಹ್ವಾಗ್ ಹೇಳಿಕೆ ಬಗ್ಗೆ ಅಭಿಮಾನಿಗಳಿಂದ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಈ ಹೇಳಿಕೆಯನ್ನು ಪ್ರಶ್ನಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.



