April 2, 2026
Thursday, April 2, 2026
spot_img

IPL ಫಸ್ಟ್ ಮ್ಯಾಚ್ ಮುಗಿತು: ಪಾಯಿಂಟ್ಸ್ ಟೇಬಲ್‌ನಲ್ಲಿ ಟಾಪ್ ನಲ್ಲಿರೋದು ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2026 ಟೂರ್ನಿ ಆರಂಭವಾಗಿ ಐದು ದಿನಗಳು ಕಳೆದಿದ್ದು, ಈಗಾಗಲೇ ಎಲ್ಲಾ 10 ತಂಡಗಳು ತಲಾ ಒಂದು ಪಂದ್ಯ ಆಡಿವೆ. ಆರಂಭಿಕ ಪಂದ್ಯಗಳ ಬಳಿಕ ಪಾಯಿಂಟ್ಸ್ ಟೇಬಲ್‌ನಲ್ಲಿ ಭಾರೀ ಬದಲಾವಣೆ ಕಂಡುಬಂದಿದ್ದು, ನೆಟ್ ರನ್ ರೇಟ್ ಆಧಾರದಲ್ಲಿ ತಂಡಗಳ ಸ್ಥಾನಮಾನ ನಿರ್ಧಾರವಾಗಿದೆ. ಆರಂಭದಲ್ಲೇ ಭರ್ಜರಿ ಗೆಲುವು ದಾಖಲಿಸಿದ ತಂಡಗಳು ಅಗ್ರ ಸ್ಥಾನಗಳನ್ನು ಅಲಂಕರಿಸಿವೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೇವಲ 12.1 ಓವರ್‌ಗಳಲ್ಲಿ ಗುರಿ ತಲುಪಿ 8 ವಿಕೆಟ್‌ಗಳ ಜಯ ಸಾಧಿಸಿದ ರಾಜಸ್ಥಾನ್ ರಾಯಲ್ಸ್ ತಂಡವು +4.171 ನೆಟ್ ರನ್ ರೇಟ್‌ನೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ. ಅದೇ ರೀತಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 202 ರನ್ ಗುರಿಯನ್ನು ಸುಲಭವಾಗಿ ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು +2.907 NRR ಜೊತೆ ಎರಡನೇ ಸ್ಥಾನದಲ್ಲಿದೆ.

ಇದನ್ನೂ ಓದಿ:

ಲಕ್ನೋ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್ ಮೂರನೇ ಸ್ಥಾನದಲ್ಲಿದ್ದರೆ, ಕೊಲ್ಕತ್ತಾ ವಿರುದ್ಧ 221 ರನ್‌ಗಳ ದೊಡ್ಡ ಗುರಿ ಚೇಸ್ ಮಾಡಿದ ಮುಂಬೈ ಇಂಡಿಯನ್ಸ್ ನಾಲ್ಕನೇ ಸ್ಥಾನ ಪಡೆದಿದೆ. ಪಂಜಾಬ್ ಕಿಂಗ್ಸ್ ಗುಜರಾತ್ ವಿರುದ್ಧದ ರೋಚಕ ಗೆಲುವಿನೊಂದಿಗೆ ಐದನೇ ಸ್ಥಾನದಲ್ಲಿದೆ.

ಇನ್ನು ಗುಜರಾತ್ ಟೈಟಾನ್ಸ್, ಕೆಕೆಆರ್, ಲಕ್ನೋ, ಸನ್‌ರೈಸರ್ಸ್ ಹಾಗೂ ಸಿಎಸ್‌ಕೆ ಕ್ರಮವಾಗಿ ಕೆಳಗಿನ ಸ್ಥಾನಗಳಲ್ಲಿ ಇದ್ದು, ಮುಂದಿನ ಪಂದ್ಯಗಳಲ್ಲಿ ಈ ಕ್ರಮದಲ್ಲಿ ಬದಲಾವಣೆ ಕಾಣುವ ಸಾಧ್ಯತೆ ಇದೆ. ಟೂರ್ನಿ ಇನ್ನಷ್ಟೇ ಆರಂಭವಾಗಿರುವುದರಿಂದ ನೆಟ್ ರನ್ ರೇಟ್ ಪ್ರಮುಖ ಪಾತ್ರವಹಿಸಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !