ಲಂಚ್‌ಗೆ ಏನಾದರೂ ರುಚಿಕರವಾದ ಸ್ಟಾರ್ಟರ್ ಬೇಕೆಂದು ಯೋಚಿಸುತ್ತಿದ್ದರೆ, ಪನೀರ್ ಪೆಪ್ಪರ್ ಫ್ರೈ ಟ್ರೈ ಮಾಡಿ. ಬಿಸಿ ಬಿಸಿ ಅನ್ನ ಅಥವಾ ರೋಟಿಯ ಜೊತೆಯಲ್ಲೂ ಇದನ್ನು ಸೈಡ್ ಡಿಶ್ ಆಗಿ ಸರ್ವ್ ಮಾಡಬಹುದು.
ಬೇಕಾಗುವ ಪದಾರ್ಥಗಳು
ಪನೀರ್ – 200 ಗ್ರಾಂ
ಈರುಳ್ಳಿ – 1
ಹಸಿಮೆಣಸಿನಕಾಯಿ – 2
ಶುಂಠಿ-ಬೆಳ್ಳುಳ್ಳಿ ಪೇಸ್ಟ್ – 1 ಟೀ ಸ್ಪೂನ್
ಕರಿಮೆಣಸು ಪುಡಿ – 1½ ಟೀ ಸ್ಪೂನ್
ಮೆಣಸಿನ ಪುಡಿ – ½ ಟೀ ಸ್ಪೂನ್
ಅರಿಶಿನ – ಚಿಟಿಕೆ
ಉಪ್ಪು – ರುಚಿಗೆ ತಕ್ಕಷ್ಟು
ಎಣ್ಣೆ – 2 ಟೇಬಲ್ ಸ್ಪೂನ್
ಕರಿಬೇವು – ಸ್ವಲ್ಪ
ಕೊತ್ತಂಬರಿ ಸೊಪ್ಪು – ಅಲಂಕಾರಕ್ಕೆ
ಮಾಡುವ ವಿಧಾನ
ಮೊದಲು ಪ್ಯಾನ್‌ನಲ್ಲಿ ಎಣ್ಣೆ ಬಿಸಿ ಮಾಡಿ ಕರಿಬೇವು, ಹಸಿಮೆಣಸಿನಕಾಯಿ ಮತ್ತು ಈರುಳ್ಳಿಯನ್ನು ಹಾಕಿ ಸ್ವಲ್ಪ ಗೋಲ್ಡನ್ ಬಣ್ಣ ಬರುವವರೆಗೆ ಹುರಿಯಿರಿ. ನಂತರ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಹಾಕಿ ಕಚ್ಚು ವಾಸನೆ ಹೋಗುವವರೆಗೆ ಬೇಯಿಸಿ.
ಈಗ ಅರಿಶಿನ, ಉಪ್ಪು, ಮೆಣಸಿನ ಪುಡಿ ಮತ್ತು ಕರಿಮೆಣಸು ಪುಡಿ ಸೇರಿಸಿ ಚೆನ್ನಾಗಿ ಫ್ರೈ ಮಾಡಿ. ಬಳಿಕ ಪನೀರ್ ತುಂಡುಗಳನ್ನು ಹಾಕಿ ನಿಧಾನವಾಗಿ ಫ್ರೈ ಮಾಡಿ. ಪನೀರ್‌ಗೆ ಮಸಾಲೆ ಚೆನ್ನಾಗಿ ಹಚ್ಚಿದ ನಂತರ 3-4 ನಿಮಿಷ ಕಡಿಮೆ ಉರಿಯಲ್ಲಿ ಬೇಯಿಸಿ.
ಕೊನೆಯಲ್ಲಿ ಕೊತ್ತಂಬರಿ ಸೊಪ್ಪು ಹಾಕಿ ಬಿಸಿ ಬಿಸಿ ಸರ್ವ್ ಮಾಡಿ. ಈ ಸ್ಟಾರ್ಟರ್ ಲಂಚ್‌ಗೆ ರುಚಿ ಹೆಚ್ಚಿಸುವುದರಲ್ಲಿ ಸಂದೇಹವೇ ಇಲ್ಲ!



