September 29, 2026
Tuesday, September 29, 2026
spot_img

ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣ: ಬೆಂಗಳೂರು, ದೆಹಲಿ, ಹೈದರಾಬಾದ್ ಐಪ್ಯಾಕ್ ಕಚೇರಿ ಮೇಲೆ ಇಡಿ ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಂಗಾಳದಲ್ಲಿ ಭಾರೀ ಸದ್ದು ಮಾಡಿದ್ದ ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಬೆಂಗಳೂರು, ದೆಹಲಿ, ಹಾಗೂ ಹೈದರಾಬಾದಿನ ಐಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದೆ.

ಜನವರಿ ತಿಂಗಳಲ್ಲಿ ಐ-ಪ್ಯಾಕ್ ಸಂಸ್ಥಾಪಕ ಮತ್ತು ನಿರ್ದೇಶಕ ಪ್ರತಿಕ್ ಗಾಂಧಿ ಅವರ ಕಚೇರಿ ,ನಿವಾಸದ ಮೇಲೆ ಇಡಿ ದಾಳಿ ನಡೆಸಿತ್ತು.ಈ ವೇಳೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸ್ಥಳಕ್ಕೆ ಧಾವಿಸಿ ತನಿಖೆಗೆ ಅಡ್ಡಿಪಡಿಸಿದ್ದರು.

ಇದೀಗ ಮತ್ತೆ ಇಡಿ ಅಧಿಕಾರಿಗಳು ರಿಷಿ ರಾಜ್ ಸಿಂಗ್ ಗೆ ಸಂಬಂಧಿಸಿದ ನಿವಾಸ ಹಾಗೂ ಕಚೇರಿಗಳಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Must Read