September 16, 2026
Wednesday, September 16, 2026
spot_img

ಬೆಂಗಳೂರು-ವಿಜಯಪುರ ನಡುವೆ ವೇಗದ ರೈಲು ಸೇವೆ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಚಿವ ಎಂ.ಬಿ. ಪಾಟೀಲ್ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಜಯಪುರ ಜಿಲ್ಲೆಯ ಆಲಮಟ್ಟಿ ಮತ್ತು ವಂದಾಲ ನಡುವಿನ 9.60 ಕಿಲೋಮೀಟರ್ ಉದ್ದದ ರೈಲ್ವೆ ಜೋಡಿ ಹಳಿ ಕಾಮಗಾರಿ ಪೂರ್ಣಗೊಂಡಿದ್ದು, ಮಾ.25ರಿಂದ ಅಧಿಕೃತವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಈ ಬೆನ್ನಲ್ಲೇ ಬೆಂಗಳೂರು ಮತ್ತು ವಿಜಯಪುರ ನಡುವೆ ಬಹುಕಾಲದ ಬೇಡಿಕೆಯಾಗಿರುವ ವೇಗದ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಆರಂಭಿಸಬೇಕು ಎಂದು ಕೋರಿ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ವಿ. ಸೋಮಣ್ಣ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಸ್ತುತ ಬೆಂಗಳೂರು ಮತ್ತು ವಿಜಯಪುರ ನಡುವಿನ ರೈಲು ಪ್ರಯಾಣಕ್ಕೆ ಸುಮಾರು 15 ಗಂಟೆಗಳ ಸುದೀರ್ಘ ಸಮಯ ತಗುಲುತ್ತಿದ್ದು, ಇದು ಪ್ರಯಾಣಿಕರಿಗೆ ತೀವ್ರ ಅನಾನುಕೂಲ ಉಂಟುಮಾಡುತ್ತಿದೆ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ. ಹೊಸದಾಗಿ ನಿರ್ಮಾಣವಾಗಿರುವ ಜೋಡಿ ಹಳಿ ಮಾರ್ಗವನ್ನು ಬಳಸಿಕೊಂಡು ಈ ಪ್ರಯಾಣದ ಅವಧಿಯನ್ನು 10 ಗಂಟೆಗಳಿಗೆ ಇಳಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ತಕ್ಷಣವೇ ಸ್ಪಂದಿಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಹೊಸ ರೈಲು ಸೇವೆ ಹಾಗೂ ವೇಳಾಪಟ್ಟಿ ಪರಿಷ್ಕರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !