April 2, 2026
Thursday, April 2, 2026
spot_img

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ಬರೋಬ್ಬರಿ 56,432 ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:


ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಾವಣಗೆರೆಯಲ್ಲಿ ಸ್ಪಷ್ಟಪಡಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ಒಟ್ಟು 56,432 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಘೋಷಿಸಿದರು.


ಹಂತ-ಹಂತವಾಗಿ ಎಲ್ಲಾ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಆಡಳಿತ ಯಂತ್ರಕ್ಕೆ ಚೈತನ್ಯ ನೀಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.


ಇದೇ ವೇಳೆ ಪ್ರತಿಪಕ್ಷಗಳ ಟೀಕೆಗೆ ಉತ್ತರಿಸಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರಿಗೆ ಬಾಕಿ ಉಳಿಸಿದ್ದ 29 ಸಾವಿರ ಕೋಟಿ ರೂಪಾಯಿಗಳ ಬಿಲ್ ಪೈಕಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ 24 ಸಾವಿರ ಕೋಟಿ ರೂಪಾಯಿಗಳನ್ನು ಪಾವತಿಸಿದೆ ಎಂದರು. ಸುಳ್ಳು ಆರೋಪ ಮಾಡುವವರಿಗೆ ಈ ಅಂಕಿ-ಅಂಶಗಳೇ ಉತ್ತರ ನೀಡಲಿವೆ ಎಂದು ಅವರು ಕಿಡಿಕಾರಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !