ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೆಟ್ರೋ ಪ್ರಯಾಣಿಕರೇ ಗಮನಿಸಿ, ಏಪ್ರಿಲ್ 5ರ ಭಾನುವಾರ ಬೆಳಿಗ್ಗೆ ನೇರಳೆ ಮಾರ್ಗದ ಸಂಚಾರದಲ್ಲಿ ತುಸು ವ್ಯತ್ಯಯವಾಗಲಿದೆ. ವಿಜಯನಗರ ಮತ್ತು ಅತ್ತಿಗುಪ್ಪೆ ನಿಲ್ದಾಣಗಳ ನಡುವೆ ಅತ್ಯಗತ್ಯ ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣ, ಅಂದು ಬೆಳಿಗ್ಗೆ 7ರಿಂದ 9 ಗಂಟೆಯವರೆಗೆ ಮೆಜೆಸ್ಟಿಕ್ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಆದರೆ, ಚಲ್ಲಘಟ್ಟದಿಂದ ಮೈಸೂರು ರಸ್ತೆವರೆಗೆ ಹಾಗೂ ಮೆಜೆಸ್ಟಿಕ್‌ನಿಂದ ವೈಟ್‌ಫೀಲ್ಡ್‌ವರೆಗಿನ ಸಂಚಾರ ಎಂದಿನಂತೆ ಇರಲಿದೆ. ಹಾಗೆಯೇ ಹಸಿರು ಮಾರ್ಗ ಹಾಗೂ ಹಳದಿ ಮಾರ್ಗಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಬೆಳಿಗ್ಗೆ 9 ಗಂಟೆಯ ನಂತರ ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲುಗಳು ಯಥಾಸ್ಥಿತಿಯಲ್ಲಿ ಸಂಚರಿಸಲಿವೆ. ಪ್ರಯಾಣಿಕರು ಈ ಸಮಯದ ಬದಲಾವಣೆಯನ್ನು ಗಮನಿಸಿ ಸಹಕರಿಸಬೇಕೆಂದು ನಮ್ಮ ಮೆಟ್ರೋ ಮನವಿ ಮಾಡಿದೆ.



