September 16, 2026
Wednesday, September 16, 2026
spot_img

ಸೋಲಿನ ಭಯದಿಂದ ಪ್ರತಿ ಹಳ್ಳಿಗೆ 10 ಲಕ್ಷ ರೂ. ಹಂಚುತ್ತಿದೆ ‘ಕೈ’ ಪಡೆ: ಛಲವಾದಿ ಗಂಭೀರ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಗಲಕೋಟೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಕಾಂಗ್ರೆಸ್ ಪಕ್ಷವು ಪ್ರತಿ ಹಳ್ಳಿಗೆ 5 ರಿಂದ 10 ಲಕ್ಷ ರೂಪಾಯಿ ಹಣ ಹಂಚುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಾಗಲಕೋಟೆಯಲ್ಲಿ ಬಿಜೆಪಿಯ ವೀರೇಂದ್ರ ಚರಂತಿಮಠ ಅವರ ಗೆಲುವು ಖಚಿತವಾಗಿದೆ. ಮುಸ್ಲಿಂ ಸಮುದಾಯವೂ ಈ ಬಾರಿ ಬಿಜೆಪಿಯನ್ನು ಬೆಂಬಲಿಸುತ್ತಿದೆ. ಹಳ್ಳಿಗಳಲ್ಲಿ ಸೋಲುವ ಭೀತಿಯಿಂದಾಗಿ ಮುಖ್ಯಮಂತ್ರಿಗಳು ಐದು ದಿನಗಳ ಕಾಲ ಅಲ್ಲಿಯೇ ಬೀಡುಬಿಟ್ಟಿದ್ದಾರೆ. ಹಳ್ಳಿಗಳಲ್ಲಿ ಸರಿಯಾದ ರಸ್ತೆಗಳಿಲ್ಲದ ಕಾರಣ ಸಿಎಂ ಬರುವ ಹಾದಿಯಲ್ಲಿ ಕೆಂಪು ಮಣ್ಣು ಹಾಕಿ ಮುಚ್ಚಲಾಗುತ್ತಿದೆ,” ಎಂದು ಟೀಕಿಸಿದರು.

ಕಾಂಗ್ರೆಸ್‌ಗೆ ಕಾರ್ಯಕರ್ತರ ಕೊರತೆ ಇರುವುದರಿಂದ ಸರ್ಕಾರಿ ನೌಕರರು ಮತ್ತು ಶಿಕ್ಷಕರನ್ನು ಚುನಾವಣಾ ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ದೂರಿದರು. ಇದೇ ವೇಳೆ ತೈಲ ಬೆಲೆ ಏರಿಕೆ ಕುರಿತು ಪ್ರತಿಕ್ರಿಯಿಸಿದ ನಾರಾಯಣಸ್ವಾಮಿ, “ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಮೊದಲೇ ಬೆಲೆ ಏರಿಸುತ್ತಾ ಬಂದಿದೆ. ತಮ್ಮ ಜನವಿರೋಧಿ ನೀತಿಗಳಿಗೆ ಬಿಜೆಪಿಯನ್ನು ಹೊಣೆ ಮಾಡುವುದು ಸರಿಯಲ್ಲ,” ಎಂದು ಕಿಡಿಕಾರಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !