September 16, 2026
Wednesday, September 16, 2026
spot_img

ಹೆಡ್, ಅಭಿಷೇಕ್ ಭರ್ಜರಿ ಬ್ಯಾಟಿಂಗ್: ಕೋಲ್ಕತ್ತಾ ಗೆಲುವಿಗೆ ಬಿಗ್ ಟಾರ್ಗೆಟ್ ಕೊಟ್ಟ ಹೈದರಾಬಾದ್

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ 20 ಓವರ್​​ಗಳಲ್ಲಿ 8 ವಿಕೆಟ್ ನಷ್ಟಕ್ಕ 226 ರನ್ ಗಳಿಸಿದ್ದು, ರಹಾನೆ ಪಡೆ ಗೆಲುವಿಗೆ ಬಿಗ್ ಟಾರ್ಗೆಟ್ ನೀಡಿದೆ.

ಮೊದಲು ಬ್ಯಾಟಿಂಗ್ ಇಳಿದ ಹೈದರಾಬಾದ್ ತಂಡಕ್ಕೆ ಹೆಡ್ ಮತ್ತು ಅಭಿಷೇಕ್ ಶರ್ಮಾ ಉತ್ತಮ ಆರಂಭ ನೀಡಿದರು. ಹೆಡ್ 21 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 46 ರನ್ ಗಳಿಸಿ ಔಟಾದರು.

ಬಳಿಕ ನಾಯಕ ಇಶಾನ್ ಕಿಶನ್ ಜೊತೆಗೆ ಅಭಿಷೇಕ್ ಶರ್ಮಾ ಉತ್ತಮ ಆಟವಾಡಿ 48 ರನ್ ಗಳಿಸಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ಇಶಾನ್ ಕಿಶನ್ 14 ರನ್ ಗಳಿಸಿ ಔಟಾದರು.

ಬಳಿಕ ಹೆನ್ರಿಚ್ ಕ್ಲಾಸೆನ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಜೋಡಿ ಹೈದರಾಬಾದ್ ಇನ್ನಿಂಗ್ಸ್ ಸುಧಾರಿಸಿದರು. ರೆಡ್ಡಿ 39 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಕ್ಲಾಸೆನ್ ಅಬ್ಬರದ ಅರ್ಧಶತಕ ಸಿಡಿಸಿ ಮಿಂಚಿದರು.

ಕೆಕೆಆರ್ ಪರ ಬ್ಲೆಸಿಂಗ್ ಮುಝರಬಾನಿ 4 ವಿಕೆಟ್ ಕಬಳಿಸಿದರೆ, ವೈಭವ್ ಅರೋರಾ 2 ಪಡೆದರು. ಕಾರ್ತಿಕ್ ತ್ಯಾಗಿ ಮತ್ತು ಅನುಕೂಲ್ ರಾಯ್ ತಲಾ ಒಂದೊಂದು ವಿಕೆಟ್ ಪಡೆದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !