April 3, 2026
Friday, April 3, 2026
spot_img

Weather | ಬೆಂಗಳೂರಲ್ಲಿ ಫುಲ್ ಮೋಡ, ಹಲವೆಡೆ ಮಳೆ ಕೂಡ ಇದ್ಯಂತೆ: 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಇಂದು ಸಹ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆ ರಾಜ್ಯದ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ದಿನಪೂರ್ತಿ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ಸಂಜೆ ಅಥವಾ ರಾತ್ರಿ ವೇಳೆ ತುಂತುರುನಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ:

ಹವಾಮಾನ ಇಲಾಖೆಯ ಪ್ರಕಾರ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.

ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜೊತೆಗೆ ಉತ್ತರ ಒಳನಾಡಿನ ಭಾಗಗಳಲ್ಲೂ ಮಳೆ ಮುಂದುವರಿಯಲಿದೆ. ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !