ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಳಿಗಿರಿರಂಗನ ಬೆಟ್ಟದ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಮತ್ತೆ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಒಂದು ವಾರದೊಳಗೆ ಎರಡನೇ ಬಾರಿ ಬೆಂಕಿ ಕಾಣಿಸಿಕೊಂಡಿರುವುದು ಅರಣ್ಯ ಇಲಾಖೆ ಹಾಗೂ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಬಾರಿ 25ಕ್ಕೂ ಹೆಚ್ಚು ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಿದ್ದು, ಹಸಿರು ಸಂಪತ್ತಿಗೆ ಭಾರೀ ಹಾನಿಯಾಗಿದೆ.
ಹನೂರು ತಾಲೂಕಿನ ಲೊಕ್ಕನಹಳ್ಳಿ ಭಾಗದ ಅರಣ್ಯ ವಲಯದಲ್ಲಿ ಕಾಣಿಸಿಕೊಂಡ ಬೆಂಕಿ ಗಾಳಿಯ ವೇಗದಿಂದ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಲು ಹಲವು ಗಂಟೆಗಳ ಕಾಲ ಹರಸಾಹಸ ಪಟ್ಟರು. ಆದರೂ ಬೆಂಕಿ ವ್ಯಾಪಕವಾಗಿ ಹರಡಿದ ಕಾರಣ ಹೆಚ್ಚಿನ ಪ್ರದೇಶ ಹಾನಿಗೊಳಗಾಗಿದೆ.
ಇದನ್ನೂ ಓದಿ:
ಸ್ಥಳೀಯರು ಅರಣ್ಯ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಡುಪ್ರಾಣಿಗಳ ನಾಡಿನತ್ತ ಆಗಮನ ಮತ್ತು ಜನರ ಸಮಸ್ಯೆಗಳ ಬಗ್ಗೆ ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಈ ಅಸಮಾಧಾನವೇ ಕಿಡಿಗೇಡಿಗಳಿಂದ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚುವ ಮಟ್ಟಕ್ಕೆ ತಲುಪಿದೆ ಎಂಬ ಚರ್ಚೆಯೂ ಕೇಳಿಬರುತ್ತಿದೆ.



