ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಈ ಬಾರಿ ರಾಜಸ್ಥಾನ ರಾಯಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಸೋಲನ್ನು ಎದುರಿಸಿದ ಸಿಎಸ್ಕೆ, ಪಂಜಾಬ್ ವಿರುದ್ಧ ಗೆಲುವಿನ ಲಯಕ್ಕೆ ಮರಳಲು ಬಯಸಿದ್ದು, ಇತ್ತ ಮೊದಲ ಪಂದ್ಯ ಗೆದ್ದ ಖುಷಿಯಲ್ಲಿರುವ ಪಂಜಾಬ್, ಗೆಲುವಿನ ಓಟ ಮುಂದುವರಿಸುವ ತವಕದಲ್ಲಿದೆ.
ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ (ನಾಯಕ), ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ಶಶಾಂಕ್ ಸಿಂಗ್, ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಯಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ವಿಜಯ್ಕುಮಾರ್ ವೈಶಾಕ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.
ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್(ನಾಯಕ), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಆಯುಷ್ ಮ್ಹಾತ್ರೆ, ಸರ್ಫರಾಜ್ ಖಾನ್, ಶಿವಂ ದುಬೆ, ಕಾರ್ತಿಕ್ ಶರ್ಮಾ, ಪ್ರಶಾಂತ್ ವೀರ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಮ್ಯಾಟ್ ಹೆನ್ರಿ, ಖಲೀಲ್ ಅಹ್ಮದ್.



