April 3, 2026
Friday, April 3, 2026
spot_img

ಚೆನ್ನೈಗೆ ಮ್ಹಾತ್ರೆ, ದುಬೆ ಬಲ: ಪಂಜಾಬ್ ಕಿಂಗ್ಸ್ ಗೆಲುವಿಗೆ 210 ರನ್ ಗಳ ಬಿಗ್ ಟಾರ್ಗೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಯುಷ್ ಮ್ಹಾತ್ರೆ, ಶಿವಂ ದುಬೆ ಭರ್ಜರಿ ಬ್ಯಾಟಿಂಗ್ ನಿಂದಾಗಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ ಕಳೆದುಕೊಂಡು 209 ರನ್​ಗಳ ಬೃಹತ್ ಮೊತ್ತ ಗಳಿಸಿದ್ದು, ಶ್ರೇಯಸ್ ಪಡೆ ಗೆಲುವಿಗೆ 210 ರನ್​ಗಳ ಟಾರ್ಗೆಟ್ ನೀಡಿದೆ.

ಟಾಸ್ ಸೋತು ಬ್ಯಾಟಿಂಗ್ ಇಳಿದ ಸಿಎಸ್​ಕೆ ಗೆ ಮತ್ತೆ ಸಂಜು ಸ್ಯಾಮ್ಸನ್ ನಿರಾಸೆ ಮೂಡಿಸಿದ್ದು, ಕೇವಲ 7 ರನ್​ಗಳಿಸಿ ಔಟಾಗಿದ್ದಾರೆ. ಬಳಿಕ ಆಯುಷ್ ಮ್ಹಾತ್ರೆ , ನಾಯಕ ರುತುರಾಜ್ ಗಾಯಕ್ವಾಡ್ ಜೊತೆಗೂಡಿ 2ನೇ ವಿಕೆಟ್‌ಗೆ 96 ರನ್​ಗಳ ಜೊತೆಯಾಟ ನೀಡಿದರು. ಗಾಯಕ್ವಾಡ್ 28 ರನ್​ಗಳಿಸಿ ಚಹಲ್‌ಗೆ ವಿಕೆಟ್ ಒಪ್ಪಿಸಿದರು.

ಮ್ಹಾತ್ರೆ ಭರ್ಜರಿ ಬ್ಯಾಟಿಂಗ್ ನಡೆಸಿ ಅರ್ಧಶತಕ ಸಿಡಿಸಿದರು. 43 ಎಸೆತಗಳಲ್ಲಿ 6 ಬೌಂಡರಿ, 5 ಸಿಕ್ಸರ್​ಗಳ ನೆರವಿನಿಂದ 73 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಜೊತೆಯಾದ ಸರ್ಫರಾಜ್ ಖಾನ್ , ಶಿವಂ ದುಬೆ ಸ್ಫೋಟಕ ಬ್ಯಾಟಿಂಗ್ ಮಾಡಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಖಾನ್ 32 ರನ್​ಗಳಿಸಿ ವಿಜಯ್ ಕುಮಾರ್‌ಗೆ ವಿಕೆಟ್ ನೀಡಿದರೆ, ದುಬೆ 45 ರನ್ ಗಳಿಸಿ ಅಜೇಯರಾಗಿ ಉಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !