ಹೊಸದಿಗಂತ ಮಡಿಕೇರಿ:
ಜಿಲ್ಲೆಯ ಹಾಕತ್ತೂರು – ಮರಗೋಡು ರಸ್ತೆಯ ಬಕ್ಕ ಎಂಬಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮರಗೋಡು ನಿವಾಸಿಯಾದ ಬಿದ್ರುಪಣೆ ಸೋಮಣ್ಣ ಅವರ ಪುತ್ರ ಪ್ರವೀಣ್ (35) ಮೃತಪಟ್ಟ ದುರ್ದೈವಿ.
ಶುಕ್ರವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಪ್ರವೀಣ್ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಬಕ್ಕ ಬಳಿ ವಾಹನವು ಅಪಘಾತಕ್ಕೀಡಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಜಖಂಗೊಂಡಿದ್ದು, ಚಾಲಕ ಪ್ರವೀಣ್ ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಯುವಕನ ಅಕಾಲಿಕ ಮರಣದಿಂದ ಮರಗೋಡು ಗ್ರಾಮದಲ್ಲಿ ವಿಷಾದದ ಛಾಯೆ ಆವರಿಸಿದೆ.



