April 4, 2026
Saturday, April 4, 2026
spot_img

ಸ್ವರ್ಣರೇಖಾ ನದಿಯಲ್ಲಿ ಮೀನುಗಳ ಮಾರಣ ಹೋಮ: ನೀರಿನ ಪರೀಕ್ಷೆಯಲ್ಲಿ ಬಯಲಾಯ್ತು ಶಾಕಿಂಗ್ ವಿಷ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾರ್ಖಂಡ್‌ನ ಜೆಮ್ಶೆಡ್‌ಪುರ ನಗರದ ಸ್ವರ್ಣರೇಖಾ ನದಿಯ ದಡದಲ್ಲಿ ಸಾವಿರಾರು ಮೀನುಗಳು ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ನದಿಯ ಹಲವೆಡೆ ಮೀನುಗಳು ತೇಲಿಬಂದ ದೃಶ್ಯಗಳು ಸಾರ್ವಜನಿಕರಲ್ಲಿ ಭೀತಿ ಮತ್ತು ಆಕ್ರೋಶ ಮೂಡಿಸಿವೆ.

ಈ ಘಟನೆಗೆ ಸಂಬಂಧಿಸಿದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸಿದ ಪ್ರಾಥಮಿಕ ಪರಿಶೀಲನೆಯಲ್ಲಿ ಗಂಭೀರ ಅಂಶಗಳು ಹೊರಬಿದ್ದಿವೆ. ನದಿ ನೀರಿನಲ್ಲಿನ ಆಮ್ಲಜನಕದ ಮಟ್ಟವು ತೀವ್ರವಾಗಿ ಇಳಿಕೆಯಾಗಿದ್ದು, ವಿಷಕಾರಿ ರಾಸಾಯನಿಕಗಳ ಪ್ರಮಾಣ ಹೆಚ್ಚಿರುವುದು ಮೀನುಗಳ ಸಾವಿಗೆ ಪ್ರಮುಖ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನಗರದ ವಿವಿಧ ಭಾಗಗಳಿಂದ ಬರುವ ಕೊಳಚೆ ನೀರು ಹಾಗೂ ಕೈಗಾರಿಕಾ ಘಟಕಗಳಿಂದ ಹೊರಬರುವ ರಾಸಾಯನಿಕ ತ್ಯಾಜ್ಯವನ್ನು ಯಾವುದೇ ಸಂಸ್ಕರಣೆಯಿಲ್ಲದೆ ನದಿಗೆ ಬಿಡಲಾಗುತ್ತಿದೆ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ. ಇದರಿಂದ ನೀರಿನ ಗುಣಮಟ್ಟ ಹದಗೆಟ್ಟು ಜಲಚರ ಜೀವಿಗಳಿಗೆ ದೊಡ್ಡ ಅಪಾಯ ಉಂಟಾಗಿದೆ.

ಇದನ್ನೂ ಓದಿ:

ಸ್ಥಳೀಯ ನಿವಾಸಿಗಳು ಈ ಸಮಸ್ಯೆ ಬಹುಕಾಲದಿಂದ ಮುಂದುವರಿದಿದ್ದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ನದಿಯ ಮಾಲಿನ್ಯವನ್ನು ತಕ್ಷಣ ತಡೆಗಟ್ಟದಿದ್ದರೆ ಜನರ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಆಡಳಿತವು ಈಗ ಮಾಲಿನ್ಯದ ಮೂಲಗಳನ್ನು ಗುರುತಿಸಿ ನದಿಯನ್ನು ಶುದ್ಧೀಕರಿಸುವ ಕಾರ್ಯಾಚರಣೆಗೆ ಮುಂದಾಗಿದೆ. ಈ ಬೆಳವಣಿಗೆ ಪರಿಸರ ಸಂರಕ್ಷಣೆಯ ಬಗ್ಗೆ ಮತ್ತೆ ಗಂಭೀರ ಚರ್ಚೆಗೆ ಕಾರಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !