April 5, 2026
Sunday, April 5, 2026
spot_img

IPL | ಚೆನ್ನೈ ವಿರುದ್ಧ ಅಪರೂಪದ ದಾಖಲೆ ಬರೆದ ವಿರಾಟ್‌ ಕೊಹ್ಲಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ವಿರುದ್ಧ ವಿರಾಟ್‌ ಕೊಹ್ಲಿ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ.

ಪಂದ್ಯದಲ್ಲಿ 18 ಎಸೆತಗಳಲ್ಲಿ 28 ರನ್ ಗಳಿಸಿದ ಕೊಹ್ಲಿ ಐಪಿಎಲ್‌ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆಯನ್ನು ಬರೆದಿದ್ದಾರೆ . ಈ ಮೂಲಕ ಕೊಹ್ಲಿ ಇಷ್ಟು ದಿನ ರೋಹಿತ್ ಶರ್ಮಾ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 36 ಪಂದ್ಯಗಳನ್ನಾಡಿದ್ದು, 1174 ರನ್ ಗಳಿಸಿದ್ದು, ಒಂದೇ ತಂಡದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯಾಗಿದೆ. ಈ ಹಿಂದೆ ರೋಹಿತ್ ಶರ್ಮಾ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 1,161 ರನ್ ಗಳಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !