ಹೊಸದಿಗಂತ ವರದಿ ಹುಬ್ಬಳ್ಳಿ:
ಕೇರಳದಲ್ಲಿ ಕಳೆದ 10 ವರ್ಷದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಆದ್ದರಿಂದ ವಿಧಾನ ಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಕೂಟಕ್ಕೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸೇರಿದಂತೆ ಹಲವು ನಾಯಕರು ಕೇರಳದಲ್ಲಿ ಚುನಾವಣಾ ಪ್ರಚಾರ ಮಾಡದಿದ್ದೇವೆ. ಅಲ್ಲಿಯ ರಾಜಕೀಯ ಪಕ್ಷಗಳಿಗೆ ಶಿಸ್ತು ಇದ್ದು, ಅವರಿಂದ ನಾವು ಕಲಿಯುವುದು ಬಹಳಷ್ಟಿದೆ ಎಂದರು.
ಇದನ್ನೂ ಓದಿ:
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಪಡೆಯುತ್ತಿರುವ ಜನ ಖುಷಿ ಪಡುತ್ತಿದ್ದಾರೆ. ಈ ಹಿನ್ನೆಲೆ ಇಲ್ಲಿ ನಡೆಯುವ ಎರಡು ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ತಿಳಿಸಿದರು. 2028ರ ವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಬೇರೆ ಅವರ ಪ್ರಶ್ನೆಗೆ ನಾನು ಉತ್ತರ ನೀಡುವುದಿಲ್ಲ. ನಮ್ಮಿಬ್ಬರ ಮಾತು ಬಿಟ್ಟರೆ ಬೇರೆ ಅವರ ಮಾತು ಗೌಣ. ನನ್ನ ತಾಳ್ಮೆಗೆ ಕಾಲವೇ ಉತ್ತರ ಹೇಳಲಿದೆ. ನಾಯಕತ್ವ ಬದಲಾವಣೆ ಬಗ್ಗೆ ನಿಮಗೆ ಏಕೇ ಸಮಸ್ಯೆ ಎಂದು ಪ್ರಶ್ನಿಸಿದರು.
ಆಟೊ ಚಾಲಕರು ಗ್ಯಾಸ್ ಬಿಟ್ಟು ಪೆಟ್ರೋಲ್ ಬಳಸಬೇಕು ಎಂಬ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ಪ್ರತಿಕ್ರಿಯಿಸಿ, ಪ್ರಹ್ಲಾದ ಜೋಶಿ ಅವರು ರಾಜ್ಯದ ಜನರ ಹಿತಕ್ಕೆ ಮೊದಲು ಆದ್ಯತೆ ನೀಡಬೇಕು. ವಿದೇಶದಿಂದ ಎರಡು ಶಿಪ್‌ಗಳು ಬಂದವು ಅವು ಏಕೆ ಗುಜರಾತ್‌ಗೆ ಹೋದವು? ಕೇಂದ್ರ ಸರ್ಕಾರಕ್ಕೆ ಉತ್ತರ ಭಾರತದ ಬಗ್ಗೆ ಹೆಚ್ಚು ಆದ್ಯತೆ ನೀಡುತ್ತದೆ. ದಕ್ಷಿಣ ಭಾರತದ ಬಗ್ಗೆ ನಿರ್ಲಕ್ಷ್ಯ ಮಾಡುತ್ತದೆ ಎಂದು ಕಿಡಿಕಾರಿದರು.



