ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಗಳಲ್ಲಿ ನೆಲೆಸಿರುವ ವಲಸೆ ಕಾರ್ಮಿಕರಿಗೆ ನೆರವಾಗಲು 5 ಕೆ.ಜಿ ತೂಕದ ಎಲ್ ಪಿಜಿ ಸಿಲಿಂಡರ್ ಗಳ ಹಂಚಿಕೆಯನ್ನು ದುಪ್ಪಟ್ಟುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಕುರಿತಂತೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕಾರ್ಯದರ್ಶಿ ಡಾ. ನೀರಜ್ ಮಿತ್ತಲ್, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. 5 ಕೆ.ಜಿ. ತೂಕದ ಎಲ್ ಪಿಜಿ ಸಿಲಿಂಡರ್ ಗಳು ರಾಜ್ಯ ಸರ್ಕಾರದ ಬಳಿ ಲಭ್ಯವಿದ್ದು, ಅವುಗಳನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ವತಿಯಿಂದ ವಲಸೆ ಕಾರ್ಮಿಕರಿಗಾಗಿ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಲಸೆ ಕಾರ್ಮಿಕರಿಗಾಗಿ ಸಿಲಿಂಡರ್ ಗಳ ಲಭ್ಯತೆಯನ್ನು ಹೆಚ್ಚಿಸಲಾಗಿದೆ. ಕಳೆದ ಮಾರ್ಚ್ 23ರ ಬಳಿಕ 5 ಕೆ.ಜಿ. ತೂಕದ ಸುಮಾರು 5 ಲಕ್ಷ 75 ಸಾವಿರ ಎಲ್ ಪಿಜಿ ಸಿಲಿಂಡರ್ ಗಳನ್ನು ಮಾರಾಟ ಮಾಡಲಾಗಿದೆ.



