April 8, 2026
Wednesday, April 8, 2026
spot_img

WEATHER | ಮಳೆರಾಯನಿಗೆ ‘ಬ್ರೇಕ್’: ರಾಜ್ಯದ ಈ 3 ಜಿಲ್ಲೆಗಳಲ್ಲಿ ಮಾತ್ರ ಇಂದು ವರುಣನ ಆರ್ಭಟ

ಕಳೆದ ಕೆಲವು ದಿನಗಳಿಂದ ಅಬ್ಬರಿಸುತ್ತಿದ್ದ ಮಳೆರಾಯ ಈಗ ರಾಜ್ಯದ ಬಹುತೇಕ ಭಾಗಗಳಲ್ಲಿ ಶಾಂತನಾಗಿದ್ದಾನೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಇಂದು ರಾಜ್ಯದ ಕೇವಲ ಕೆಲವೇ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಾತ್ರ ಇಂದು ವರುಣನ ದರ್ಶನವಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಈ ಮೂರು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ರಾಜ್ಯದ ಉಳಿದ ಭಾಗಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲದಿದ್ದು, ಶುಷ್ಕ ವಾತಾವರಣ ಮುಂದುವರಿಯಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೂಡ ಮಳೆಯಿಲ್ಲದೆ ಹವಾಮಾನ ಶುಷ್ಕವಾಗಿರಲಿದೆ.

ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿಸಿಲ ಧಗೆ ಹೆಚ್ಚಾಗಲಿದ್ದು, ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !