October 3, 2026
Saturday, October 3, 2026
spot_img

SHOCKING | ಅರಬೈಲ್ ಘಟ್ಟದಲ್ಲಿ ಅಗ್ನಿಗೆ ಆಹುತಿಯಾದ ಕಾರು: ಚಾಲಕ ಸಜೀವ ದಹನ

ಹೊಸದಿಗಂತ ವರದಿ, ಯಲ್ಲಾಪುರ :

ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರೊಂದಕ್ಕೆ ಬೆಂಕಿ ತಗುಲಿ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಹುಬ್ಬಳ್ಳಿ ಕಡೆಯಿಂದ ಅಂಕೋಲಾಕ್ಕೆ ತೆರಳುತ್ತಿರುವಾಗ ಈ ಘಟನೆ ಸಂಭವಿಸಿದೆ. ವೋಕ್ಸ್‌ವೇಗನ್ ಕಂಪನಿಗೆ ಸೇರಿದ ಕಾರು ಅಪಘಾತಕ್ಕೀಡಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿಯೇ ಇಡೀ ಕಾರು ಸುಟ್ಟು ಭಸ್ಮವಾಗಿದೆ.

ಕಾರಿನಲ್ಲಿದ್ದ ಚಾಲಕ ಗುರುತು ಸಿಗದಂತೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮೃತಪಟ್ಟ ಕಾರು ಚಾಲಕನ ಗುರುತು ಪತ್ತೆಗಾಗಿ ಪೊಲೀಸರು ತನಿಖೆ ಚುರುಕು ಗೊಳಿಸಿದ್ದಾರೆ .

Must Read