April 8, 2026
Wednesday, April 8, 2026
spot_img

ಕದನ ವಿರಾಮದ ನಡುವೆಯೂ ಇರಾನ್ ನ ಲಾವನ್ ದ್ವೀಪದ ತೈಲ ಘಟಕದ ಮೇಲೆ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯ ಸಂಘರ್ಷಕ್ಕೆ ಅಲ್ಪ ವಿರಾಮ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಇರಾನ್ ನ ಲಾವನ್​ ದ್ವೀಪ ದಲ್ಲಿರುವ ತೈಲ ಸಂಸ್ಕರಣಾಗಾರದ ಮೇಲೆ ದಾಳಿ ನಡೆದಿದೆ .

ಬೆಳಿಗ್ಗೆ ಸುಮಾರು 10 ಗಂಟೆಗೆ ವೇಳೆ ತೈಲ ಸಂಸ್ಕರಣಾಗಾರದ ಮೇಲೆ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದ್ದು, ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ದಾಳಿಗೆ ಸಂಸ್ಕರಣಾಗಾರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ತಂಡಗಳನ್ನು ತಕ್ಷಣವೇ ನಿಯೋಜಿಸಲಾಯಿತು ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ನಲವತ್ತು ದಿನಗಳಿಂದ ನಡೆಯುತ್ತಿರುವ ಯುದ್ಧಕ್ಕೆ ಅಮೆರಿಕ ಇಂದು ಷರತ್ತುಬದ್ಧ ಕದನ ವಿರಾಮವನ್ನು ಘೋಷಿಸಿದೆ. ಮುಂದಿನ ಎರಡು ವಾರಗಳವರೆಗೆ ಪರಸ್ಪರ ದಾಳಿ ಮಾಡದಂತೆ ಶಾಂತಿ ಒಪ್ಪಂದಕ್ಕೆ ಬಂದಿವೆ. ಆದರೆ ಇದೀಗ ಲಾವೆಲ್​ ಮೇಲಿನ ದಾಳಿಯಿಂದಾಗಿ ಸಂಘರ್ಷವು ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !