ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳ, ಪುದುಚೇರಿ ಮತ್ತು ಅಸ್ಸಾಂ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೂ, ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿ ಕ್ಷೇತ್ರಗಳಿಗೂ ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದೆ.
ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಈ ಬಾರಿ ಯುವಪೀಳಿಗೆಯ ಉತ್ಸಾಹ ನೋಡಬೇಕು. ಎಲ್ಲರೂ ಮತದಾನದಲ್ಲಿ ಭಾಗವಹಿಸಿ ಎಂದಿದ್ದಾರೆ.
2026ರ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ನಾನು ಕರೆ ನೀಡುತ್ತೇನೆ. ದಾಖಲೆ ಮಟ್ಟದ ಭಾಗವಹಿಸುವಿಕೆ ಕೇರಳದ ಪ್ರಜಾಪ್ರಭುತ್ವದ ಆತ್ಮಕ್ಕೆ ಚೈತನ್ಯ ತುಂಬಲಿದೆ. ವಿಶೇಷವಾಗಿ ರಾಜ್ಯದ ಯುವಕ-ಯುವತಿಯರು ಮತ್ತು ಮಹಿಳೆಯರು ಮುಂದೆ ಬಂದು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ವಿನಂತಿಸುತ್ತೇನೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.



