April 9, 2026
Thursday, April 9, 2026
spot_img

ಮೃತಪಟ್ಟ ಪತಿಯ ದೇಹದ ಜತೆ ಹತ್ತು ದಿನ ಕಳೆದ ಮಾನಸಿಕ ಅಸ್ವಸ್ಥ ಪತ್ನಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮೃತಪಟ್ಟ ಪತಿಯ ಮೃತದೇಹದ ಜೊತೆ ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಹತ್ತು ದಿನಗಳನ್ನು ಕಳೆದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ನಡೆದಿದೆ.

ಅನಾರೋಗ್ಯದಿಂದ 77 ವರ್ಷದ ಸಿರಿಲ್ ಮೋನಿಸ್ ಮೃತಪಟ್ಟಿದ್ದಾರೆ. ಮಾನಸಿಕವಾಗಿ ಅಸ್ವಸ್ಥರಾಗಿರುವ ಪತ್ನಿಗೆ ತಮ್ಮ ಪತಿ ಮೃತಪಟ್ಟಿದ್ದಾರೆ ಎನ್ನುವುದು ಕೂಡ ಗೊತ್ತಾಗಿಲ್ಲ. ಮಲಗಿಯೇ ಇದ್ದಾರೆ ಎಂದುಕೊಂಡು ಆಕೆ ದಿನಕಳೆದಿದ್ದಾಳೆ.

ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಒಬ್ಬರು ಬೆಂಗಳೂರಿನಲ್ಲಿ, ಇನ್ನೊಬ್ಬರು ದುಬೈನಲ್ಲಿ ಇದ್ದಾರೆ. ಮೃತ ಮೋನಿಸ್ ಅವರ ಮಗ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿದ್ದರೆ, ಮಗಳು ದುಬೈನಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಮಗ ನಿತ್ಯ ತಾಯಿಗೆ ಫೋನ್ ಮಾಡಿ ಅಪ್ಪನ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದನಂತೆ. ಆದರೆ ಪ್ರತಿ ಸಲ ಮಗ ಫೋನ್ ಮಾಡಿ ಅಪ್ಪನ ಬಗ್ಗೆ ವಿಚಾರಿಸಿದಾಗ ಮಾನಸಿಕ ಅಸ್ವಸ್ಥ ತಾಯಿ ಮಾತ್ರ ‘ಅಪ್ಪ ಚೆನ್ನಾಗಿದ್ದಾರೆ, ಮಲಗಿದ್ದಾರೆ ಎಂದೇ ಹೇಳುತ್ತಿದ್ದಳಂತೆ. ಇದರಿಂದ ಮಗನಿಗೂ ಅಪ್ಪ ಮೃತಪಟ್ಟಿರುವ ಬಗ್ಗೆ ತಿಳಿದಿಲ್ಲ.

ಹತ್ತು ದಿನಗಳ ನಂತರ ಮೋನಿಸ್‌ ಅವರ ಮೃತದೇಹದಿಂದ ಹುಳಗಳು ಬಂದು ವಾಸನೆ ಬಂದಿದೆ. ಅಕ್ಕಪಕ್ಕದವರು ಬಂದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಮೃತದೇಹವನ್ನು ತೆಗೆದುಕೊಂಡು ಹೋಗಲು ಪೊಲೀಸರು ಬಂದಿದ್ದಾರೆ. ಆದರೆ ನನ್ನ ಗಂಡ ಬೇಕು, ಅವರನ್ನು ಕರೆದುಕೊಂಡು ಹೋಗಬೇಡಿ. ಅವರು ಮಲಗಿದ್ದಾರೆ ಎಂದು ಹಠ ಮಾಡಿದ್ದಾರೆ. ಅಂತಿಮವಾಗಿ ಬಣಕಲ್ ಕ್ರೈಸ್ತ ಸ್ಮಶಾನದಲ್ಲಿ ಮೋನಿಸ್ ಅವರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !