July 4, 2026
Saturday, July 4, 2026
spot_img

ಟಾರ್ಗೆಟ್ ಅಸೆಂಬ್ಲಿ: ದೆಹಲಿ ಸಚಿವಾಲಯಕ್ಕೆ ಹರಿದುಬಂತು ಬಾಂಬ್ ಬೆದರಿಕೆ ಸಂದೇಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದ ರಾಜಧಾನಿ ದೆಹಲಿಯಲ್ಲಿ ಬಾಂಬ್ ಭೀತಿ ಮತ್ತೆ ಎದುರಾಗಿದೆ. ಈ ಬಾರಿ ದೆಹಲಿ ವಿಧಾನಸಭೆ ಸೇರಿದಂತೆ ಪ್ರಮುಖ ಸರ್ಕಾರಿ ಕಚೇರಿಗಳು ಮತ್ತು ಶಾಲೆಗಳಿಗೆ ಇಮೇಲ್ ಮೂಲಕ ಸ್ಫೋಟದ ಎಚ್ಚರಿಕೆ ನೀಡಲಾಗಿದೆ.

ಇಂದು ಬೆಳಿಗ್ಗೆ ಸರಿಯಾಗಿ 8:14ಕ್ಕೆ ವಿಧಾನಸಭೆಯ ಅಧಿಕೃತ ಇನ್‌ಬಾಕ್ಸ್ ಹಾಗೂ ಇತರ ಸರ್ಕಾರಿ ಇಮೇಲ್‌ಗಳಿಗೆ ಬೆದರಿಕೆ ಸಂದೇಶ ಬಂದಿದೆ. “ಇಂದು ಯಾವುದೇ ಕ್ಷಣದಲ್ಲಿ ವಿಧಾನಸಭೆ, ಸಚಿವಾಲಯ, ಕೆಲವು ಶಾಲೆಗಳು ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಸ್ಫೋಟ ಸಂಭವಿಸಲಿದೆ” ಎಂದು ಇಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ. ವಿಶೇಷವೆಂದರೆ, ಈ ಹಿಂದೆಯೂ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಇಂತಹುದೇ ಬೆದರಿಕೆ ಕರೆ ಬಂದಿತ್ತು.

ಮಾಹಿತಿ ತಿಳಿಯುತ್ತಿದ್ದಂತೆಯೇ ದೆಹಲಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರೀಯ ದಳ ಕಾರ್ಯಪ್ರವೃತ್ತರಾಗಿದ್ದಾರೆ. ಅನುಮಾನಾಸ್ಪದ ಸ್ಥಳಗಳಲ್ಲಿ ತೀವ್ರ ಶೋಧ ನಡೆಸಲಾಗಿದ್ದು, ಮೆಟ್ರೋ ನಿಲ್ದಾಣ ಹಾಗೂ ಶಾಲೆಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸದ್ಯಕ್ಕೆ ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲದಿದ್ದರೂ, ನಗರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !