ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ವಿದ್ವಾಂಸ-ಲೇಖಕ, ನಾಡೋಜ, ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಎಸ್. ಆರ್. ರಾಮಸ್ವಾಮಿ ನಿಧನಕ್ಕೆ ಆರೆಸ್ಸೆಸ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಆರೆಸ್ಸೆಸ್ ತೀವ್ರ ಸಂತಾಪ
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಸಹಸರಕಾರ್ಯವಾಹ ಮುಕುಂದ ಸಿ ಆರ್, ಕ್ಷೇತ್ರೀಯ ಸಂಘಚಾಲಕ ಡಾ. ಪಿ. ವಾಮನ್ ಶೆಣೈ, ಕ್ಷೇತ್ರೀಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ, ಕರ್ನಾಟಕ ದಕ್ಷಿಣ ಪ್ರಾಂತ ಸಂಘಚಾಲಕ ಜಿ. ಎಸ್. ಉಮಾಪತಿ, ಪ್ರಾಂತ ಕಾರ್ಯವಾಹ ಡಾ. ಎಂ. ಜಯಪ್ರಕಾಶ್ ಸೇರಿದಂತೆ ಅನೇಕ ಗಣ್ಯರು ಡಾ. ಎಸ್ ಆರ್ ರಾಮಸ್ವಾಮಿ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
ಆರು ದಶಕಗಳ ಕಾಲ ಪತ್ರಿಕೋದ್ಯಮ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಡಾ. ಎಸ್.ಆರ್. ರಾಮಸ್ವಾಮಿ ಅವರು 1966ರಿಂದ ರಾಷ್ಟ್ರೋತ್ಥಾನ ಪರಿಷತ್ ನ ಜೊತೆಗೆ ನಿಕಟ ಸಂಪರ್ಕ ಹೊಂದಿದವರು. ಕಳೆದ 47 ವರ್ಷಗಳಿಂದ (1979) ‘ಉತ್ಥಾನ’ ಮಾಸಪತ್ರಿಕೆಯ ಮತ್ತು ‘ರಾಷ್ಟ್ರೋತ್ಥಾನ ಸಾಹಿತ್ಯ’ ಪ್ರಕಾಶನದ ಪ್ರಧಾನ ಸಂಪಾದಕರಾಗಿದ್ದಾರೆ. 1972-1979ರ ಅವಧಿಯಲ್ಲಿ ‘ಸುಧಾ’ ವಾರಪತ್ರಿಕೆಯ ಮುಖ್ಯ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.



