July 27, 2026
Monday, July 27, 2026
spot_img

ನಾಳೆ ಜೆಡಿಎಸ್‌ ಬೆಳ್ಳಿಹಬ್ಬ ಬೃಹತ್ ಸಮಾವೇಶ :‌ ಲಕ್ಷಾಂತರ ಮಂದಿ ಭಾಗಿಯಾಗುವ ನಿರೀಕ್ಷೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜೆಡಿಎಸ್‌ ಪಕ್ಷ ಆರಂಭವಾಗಿ 25 ವರ್ಷ ಕಳೆದ ಹಿನ್ನೆಲೆಯಲ್ಲಿ ನಾಳೆ ಬೆಳ್ಳಿ ಹಬ್ಬವನ್ನು ಆಚರಿಸಲಾಗುತ್ತಿದೆ.

ಬೆಂಗಳೂರಿನ ಕೊಮ್ಮಘಟ್ಟದ ಬಳಿ ಸಮಾವೇಶ ನಡೆಯಲಿದ್ದು, ಲಕ್ಷಾಂತರ ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಈಗಾಗಲೇ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸಿದ್ದು, ಪೂರ್ವಭಾವಿ ಸಿದ್ಧತೆಗಳನ್ನು ನೋಡಿದ್ದಾರೆ.‌

25 ವರ್ಷ ಪಕ್ಷ ಪೂರೈಕೆ ಮಾಡಿದೆ. ಬೆಂಗಳೂರಿನಲ್ಲಿ ಜೆಡಿಎಸ್ ಶಕ್ತಿ ಕುಗ್ಗಿದೆ ಅಂತ ಅನೇಕರು ಹೇಳ್ತಾರೆ‌. ಆದರೆ ನಮಗೂ ಶಕ್ತಿ ಇದೆ. ಬೆಂಗಳೂರಿನಲ್ಲಿ ಸಂಘಟನೆ ಒತ್ತು ಕೊಡಬೇಕು. ಜಿಬಿಎ ಚುನಾವಣೆಗೆ ಸಿದ್ಧತೆ ಆಗ್ತಿದೆ. ಸುಪ್ರೀಂ ಕೋರ್ಟ್ ಕೂಡಾ ಚುನಾವಣೆ ಮಾಡಬೇಕು ಅಂತ ಹೇಳಿದೆ. ಜಿಬಿಎ ಚುನಾವಣೆಯಲ್ಲಿ ಹೊಸ ನಾಯಕರು ಸೃಷ್ಟಿ ಆಗ್ತಾರೆ. ಬೆಂಗಳೂರಿನಲ್ಲಿ ಅನೇಕ ಸಮಸ್ಯೆಗಳು ಇವೆ. ಜನರು ಎಚ್ಚೆತ್ತುಕೊಳ್ಳಲು ಇದೊಂದು ಸಮಾವೇಶ ಮಾಡ್ತಾ ಇದ್ದೇವೆ ಎಂದು ನಿಖಿಲ್‌ ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !