April 10, 2026
Friday, April 10, 2026
spot_img

ಮಂಗಳೂರು ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಉಪ ಕುಲಪತಿ ಫಾದರ್ ಮೆಲ್ವಿನ್ ಜೆ. ಪಿಂಟೊ ವಿಧಿವಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ನಗರದ ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಪ್ರೊ-ಚಾನ್ಸೆಲರ್, ಸಂತ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ಮತ್ತು ಮಂಗಳೂರು ಜೆಸ್ಯೂಟ್ ಎಜುಕೇಷನಲ್ ಸೊಸೈಟಿ (ಎಂಜೆಇಎಸ್) ಉಪಾಧ್ಯಕ್ಷ ಫಾ.ಮೆಲ್ವಿನ್ ಜೆ ಪಿಂಟೊ ಎಸ್‌ಜೆ (63) ಅನಾರೋಗ್ಯದಿಂದ ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮಂಗಳೂರಿನ ಸಂತ ಅಲೋಶಿಯಸ್‌ನಲ್ಲಿ ತಮ್ಮ ಶಾಲಾ ಮತ್ತು ಕಾಲೇಜು ಶಿಕ್ಷಣವನ್ನು ಪೂರ್ಣಗೊಳಿಸಿದ ಬಳಿಕ ಜೆಸ್ಯೂಟ್ ಪಾದ್ರಿಯಾಗಿ ಸೇರ್ಪಡೆಗೊಂಡರು. ಅವರು 1996 ಮತ್ತು 1999 ರ ನಡುವೆ ಹಾಸನದ ಸೇಂಟ್ ಜೋಸೆಫ್ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದರು. ನಂತರ ಸೇಂಟ್ ಜೋಸೆಫ್ ಇಂಡಿಯನ್ ಪಿಯು ಕಾಲೇಜನ್ನು ಸ್ಥಾಪಿಸಿದರು. ಅಲ್ಲಿ ಅವರು 2007 ರವರೆಗೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು. ನಂತರ ಅವರು 2007 ರಿಂದ 2011 ರವರೆಗೆ ಮಂಗಳೂರಿನ ಸೇಂಟ್ ಅಲೋಶಿಯಸ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾಗಿ ಮತ್ತು 2012 ರವರೆಗೆ ಹಾಸನದ ಸೇಂಟ್ ಜೋಸೆಫ್ ಪಿಯು ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !