ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮೀರ್ ಅಹ್ಮದ್‌ಗೆ 2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಸತಿ ಸಚಿವರ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಸಾಲ ನೀಡಿದ ವ್ಯಕ್ತಿಗಳ ಪಟ್ಟಿ ಸಿಕ್ಕಿದೆ. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರ ಹೆಸರು ಇದ್ದ ಕಾರಣ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ರಾಧಿಕಾ, ದಶಕದ ಹಿಂದೆ ತಾವು ಸಚಿವ ಜಮೀರ್ ಅವರಿಗೆ ಸಾಲ ಕೊಟ್ಟಿದ್ದನ್ನು ಒಪ್ಪಿಕೊಂಡು ಹೇಳಿಕೆ ದಾಖಲಿಸಿದ್ದಾರೆ.
2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜತೆ ನಂಟು ಹೊಂದಿದ್ದ ಆರೋಪದ ಮೇರೆಗೆ ಜಮೀರ್ ಖಾನ್ ಅವರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.