August 26, 2026
Wednesday, August 26, 2026
spot_img

‘ಯಾರೇ ಬಂದ್ರೂ ಎದುರಿಸೋಕೆ DMK ರೆಡಿ’: ಡೈರೆಕ್ಟ್ ಆಗಿ ವಿಜಯ್ ಗೆ ಟಾಂಟ್ ಇಟ್ರಾ ಸ್ಟಾಲಿನ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ರಾಜಕೀಯದಲ್ಲಿ ನಟ ದಳಪತಿ ವಿಜಯ್ ಎಂಟ್ರಿ ಭಾರೀ ಚರ್ಚೆಗೆ ಕಾರಣವಾಗಿರುವ ನಡುವೆ, ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸ್ಪಷ್ಟ ಪ್ರತಿಕ್ರಿಯೆ ನೀಡಿದ್ದಾರೆ. “ಯಾರು ಬಂದರೂ ಅವರನ್ನು ಎದುರಿಸಲು ಡಿಎಂಕೆ ಸಂಪೂರ್ಣ ಸಿದ್ಧವಾಗಿದೆ. ನಮಗೆ ಯಾವುದೇ ಆತಂಕ ಇಲ್ಲ” ಎಂದು ಅವರು ಆತ್ಮವಿಶ್ವಾಸದಿಂದ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸ್ಟಾಲಿನ್, ರಾಜ್ಯದ ಜನತೆ ರಾಜಕೀಯ ಬೆಳವಣಿಗೆಗಳನ್ನು ಬಹಳ ಸಮೀಪದಿಂದ ಗಮನಿಸುತ್ತಿದ್ದಾರೆ ಎಂದು ಹೇಳಿದರು. ಯಾರು ಏನು ಹೇಳುತ್ತಾರೆ, ಯಾವ ಪಕ್ಷ ಹೇಗೆ ನಡೆದುಕೊಳ್ಳುತ್ತದೆ ಎಂಬುದನ್ನು ಜನರು ಅರ್ಥಮಾಡಿಕೊಂಡು ಸರಿಯಾದ ಸಮಯದಲ್ಲಿ ತಮ್ಮ ಪ್ರತಿಕ್ರಿಯೆ ನೀಡುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ:

ಇದೇ ವೇಳೆ, 234 ಕ್ಷೇತ್ರಗಳಲ್ಲೂ ಡಿಎಂಕೆ ನೇತೃತ್ವದ ಮೈತ್ರಿಕೂಟ ಉತ್ತಮ ಪ್ರದರ್ಶನ ನೀಡಲಿದೆ ಎಂದು ಸ್ಟಾಲಿನ್ ಭರವಸೆ ವ್ಯಕ್ತಪಡಿಸಿದರು. ವಿರೋಧ ಪಕ್ಷಗಳ ಹೇಳಿಕೆಗಳಲ್ಲಿ ಸೋಲಿನ ಭಯ ಮತ್ತು ಹತಾಶೆ ಸ್ಪಷ್ಟವಾಗಿ ಕಾಣುತ್ತಿದೆ ಎಂದು ಅವರು ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಗೆ ಟೀಕೆ ಮಾಡಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆಯು ಏಪ್ರಿಲ್ 23ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ. ಈ ಬಾರಿ ಡಿಎಂಕೆ, ಎಐಎಡಿಎಂಕೆ-ಬಿಜೆಪಿ ಮೈತ್ರಿ ಹಾಗೂ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷದ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ವಿಜಯ್ ಅವರ ಚೊಚ್ಚಲ ರಾಜಕೀಯ ಪ್ರವೇಶ ಈ ಚುನಾವಣೆಗೆ ಇನ್ನಷ್ಟು ರಂಗೇರಿಸಿದೆ.

ಈ ಹಿನ್ನೆಲೆಯಲ್ಲಿ ತಮಿಳುನಾಡಿನ ರಾಜಕೀಯ ಕಣ ಇದೀಗ ಮತ್ತಷ್ಟು ಕಾವೇರಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !