April 11, 2026
Saturday, April 11, 2026
spot_img

ಬೆಳಗಾವಿಯ ಪ್ರತಿಷ್ಠಿತ ಹೊಟೇಲ್ ನಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ

ಹೊಸದಿಗಂತ ಬೆಳಗಾವಿ:

ನಗರದಲ್ಲಿರುವ ಕ್ಲಬ್ ರಸ್ತೆಯಲ್ಲಿರುವ ಪ್ರತಿಷ್ಠಿತ ‘ಈಫಾ’ ಹೊಟೇಲ್ನಲ್ಲಿ ಇಂದು ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದೆ. ಹೊಟೇಲ್ನ ಒಂದು ಭಾಗದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸುತ್ತಮುತ್ತಲಿನ ಪರಿಸರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚೆತ್ತುಕೊಂಡ ಹೊಟೇಲ್ ಸಿಬ್ಬಂದಿ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು. ಅದೃಷ್ಟವಶಾತ್, ಹೊಟೇಲ್ನಲ್ಲಿದ್ದ ಪ್ರವಾಸಿಗರು ಮತ್ತು ಸಿಬ್ಬಂದಿ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಆದರೆ, ಬೆಂಕಿಯ ತೀವ್ರತೆಗೆ ಹೋಟೆಲ್‌ನ ಆಸ್ತಿಪಾಸ್ತಿಗೆ ಭಾರಿ ಪ್ರಮಾಣದ ಹಾನಿಯಾಗಿದೆ ಎಂದು ವರದಿಯಾಗಿದೆ.

ಘಟನೆಯ ವೇಳೆ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸುತ್ತಿದ್ದ ಸಾರ್ವಜನಿಕರನ್ನು ಹೊಟೇಲ್ ಸಿಬ್ಬಂದಿ ತಡೆದಿದ್ದು, ಈ ವೇಳೆ ಕೆಲ ಕಾಲ ಗೊಂದಲ ಉಂಟಾಯಿತು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್ ಅಥವಾ ಅಡುಗೆ ಮನೆಯಲ್ಲಿ ಗ್ಯಾಸ್ ಸೋರಿಕೆಯಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಅಗ್ನಿಶಾಮಕ ದಳ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಿಸಿದ್ದು, ಘಟನೆಗೆ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !