April 11, 2026
Saturday, April 11, 2026
spot_img

ದಾಖಲೆ ಇಲ್ಲದ ಆರೋಪಕ್ಕೆ ಬೆಲೆ ಇಲ್ಲ: ಕಾಂಗ್ರೆಸ್‌ನಲ್ಲಿ ಶುರುವಾಯ್ತು ‘ಬ್ಲೇಮ್ ಗೇಮ್’!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಾವಣಗೆರೆ ಉಪಚುನಾವಣೆ ಮುಕ್ತಾಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ಶುರುವಾಗಿದೆ. ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಕಾಂಗ್ರೆಸ್ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಲೀಂ ಮೊಹಮ್ಮದ್ ನೀಡಿದ ಹೇಳಿಕೆಗಳ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಅವರು, “ಪಕ್ಷದ ಕಚೇರಿಯನ್ನು ಇಂತಹ ಆರೋಪಗಳನ್ನು ಮಾಡಲು ವೇದಿಕೆಯನ್ನಾಗಿ ಬಳಸಿಕೊಂಡಿರುವುದು ದುರದೃಷ್ಟಕರ. ಗಾಳಿಯಲ್ಲಿ ಗುಂಡು ಹೊಡೆಯುವ ಬದಲು, ಪುರಾವೆಗಳಿದ್ದರೆ ದಾಖಲೆ ಸಮೇತ ಮಾತನಾಡಲಿ,” ಎಂದು ಕಿಡಿಕಾರಿದ್ದಾರೆ.

ದಾವಣಗೆರೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, “ಒಂದು ವೇಳೆ ಫಲಿತಾಂಶ ವ್ಯತಿರಿಕ್ತವಾಗಿ ಬಂದರೆ, ಅದರ ಸೋಲನ್ನು ನಮ್ಮ ತಲೆಗೆ ಕಟ್ಟಲು ಈಗಿನಿಂದಲೇ ಸಂಚು ನಡೆಯುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !