ಹೊಸದಿಗಂತ ಬೀದರ್:
ಜಿಲ್ಲೆಯ ಚಿಟಗುಪ್ಪ ತಾಲೂಕಿನ ಮನ್ನಾಏಖ್ಖೆಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುತ್ತಂಗಿ ಗ್ರಾಮದಲ್ಲಿ ಆಕಸ್ಮಿಕ ಅಗ್ನಿ ಅವಘಡವೊಂದು ಸಂಭವಿಸಿದೆ.
ಗ್ರಾಮದ ಶಾಹಬುದ್ದೀನ್ ಶಾ ನಿರ್ಣಾ ಎಂಬುವವರಿಗೆ ಸೇರಿದ ಬೈಕ್ ಗ್ಯಾರೇಜ್‌ನಲ್ಲಿ ಹಠಾತ್ತಾಗಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಗ್ಯಾರೇಜ್‌ನಲ್ಲಿದ್ದ 7 ಬೈಕ್‌ಗಳು ಬೆಂಕಿಗೆ ಆಹುತಿಯಾಗಿವೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ಸುಮಾರು 5 ರಿಂದ 6 ಲಕ್ಷ ರೂಪಾಯಿಗಳಷ್ಟು ನಷ್ಟ ಉಂಟಾಗಿದೆ ಎಂದು ಗ್ಯಾರೇಜ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ. ಮನ್ನಾಎಖ್ಖೆಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



