ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಚಿತ್ರರಂಗದ ದಂತಕಥೆ, ಸಾವಿರಾರು ಸುಮಧುರ ಗೀತೆಗಳಿಗೆ ಧ್ವನಿಯಾಗಿದ್ದ ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಇಂದು ವಿಧಿವಶರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಪ್ರತಿಷ್ಠಿತ ಬ್ರಿಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ.
ಅವರ ನಿಧನದ ಸುದ್ದಿಯನ್ನು ಪುತ್ರ ಆನಂದ್ ಭೋಸ್ಲೆ ಖಚಿತಪಡಿಸಿದ್ದು, “ಅಮ್ಮ ಇನ್ನಿಲ್ಲ. ಅವರ ಅಂತ್ಯಕ್ರಿಯೆಯು ನಾಳೆ ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನೆರವೇರಲಿದೆ” ಎಂದು ಮಾಹಿತಿ ನೀಡಿದ್ದಾರೆ.
ಆರು ದಶಕಗಳ ಕಾಲ ಬಾಲಿವುಡ್ ಸೇರಿದಂತೆ ವಿವಿಧ ಭಾಷೆಗಳಲ್ಲಿ ಸಾವಿರಾರು ಗೀತೆಗಳನ್ನು ಹಾಡುವ ಮೂಲಕ ಅವರು ಸಂಗೀತ ಪ್ರೇಮಿಗಳನ್ನು ಮಂತ್ರಮುಗ್ಧಗೊಳಿಸಿದ್ದರು.
ಭಾರತೀಯ ಸಂಗೀತ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಈ ದಂತಕಥೆಯ ಅಗಲಿಕೆಗೆ ದೇಶಾದ್ಯಂತ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ.



