ಹೊಸದಿಗಂತ ಡಿಜಿಟಲ್ ಡೆಸ್ಕ್:
ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ಬಿಡುಗಡೆಗೂ ಮುನ್ನವೇ ಪೈರಸಿ ಕಾಟಕ್ಕೆ ಸಿಲುಕಿದ್ದು, ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಚಿತ್ರದ ಕೆಲವು ಸಂಪೂರ್ಣ ದೃಶ್ಯಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿರುವ ಹಿನ್ನೆಲೆ, ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಕಠಿಣ ಎಚ್ಚರಿಕೆ ನೀಡಿದೆ.
ಅಧಿಕೃತ ಪ್ರಕಟಣೆಯಲ್ಲಿ, ಲೀಕ್ ಆಗಿರುವ ದೃಶ್ಯಗಳನ್ನು ಡೌನ್‌ಲೋಡ್ ಮಾಡುವುದು, ನೋಡುವುದು, ಸಂಗ್ರಹಿಸಿಡುವುದು ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದು ಕಾನೂನುಬಾಹಿರ ಎಂದು ಸ್ಪಷ್ಟಪಡಿಸಲಾಗಿದೆ. ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.
ಇದನ್ನೂ ಓದಿ:
ಈ ಪ್ರಕರಣದ ತನಿಖೆಗೆ ಆಂಟಿ ಪೈರಸಿ ಸಂಸ್ಥೆ WarX ಅನ್ನು ನೇಮಿಸಲಾಗಿದ್ದು, ಮೂಲ ಪ್ರಿಂಟ್ ಅನ್ನು ಯಾರು ಸೋರಿಕೆ ಮಾಡಿದ್ದಾರೆ ಎಂಬುದನ್ನು ಪತ್ತೆಹಚ್ಚುವ ಕಾರ್ಯ ಜೋರಾಗಿದೆ. ಜೊತೆಗೆ ಟೊರೆಂಟ್ ಮೂಲಕ ಸಿನಿಮಾ ಡೌನ್‌ಲೋಡ್ ಮಾಡುವವರ ಐಪಿ ವಿಳಾಸಗಳನ್ನು ಸಂಗ್ರಹಿಸುವ ಪ್ರಕ್ರಿಯೆಯೂ ಆರಂಭವಾಗಿದೆ ಎನ್ನಲಾಗಿದೆ.
ಇದರ ಪರಿಣಾಮವಾಗಿ, ಸಾಮಾನ್ಯವಾಗಿ ಡೌನ್‌ಲೋಡ್ ಮಾಡಿಕೊಂಡವರಿಗೂ ನೋಟಿಸ್ ಬರುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ವಿದೇಶಗಳಲ್ಲಿ ಸಾಮಾನ್ಯವಾಗಿರುವ ಈ ರೀತಿಯ ಕ್ರಮ ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ಜಾರಿಯಾಗುವ ಸಾಧ್ಯತೆ ಇದೆ.



