June 1, 2026
Monday, June 1, 2026
spot_img

ಬಿಮ್ಸ್‌ನಲ್ಲಿ ಗರ್ಭಿಣಿ ಸಾವು: ಸರಿಯಾಗಿ ನೋಡ್ಕೊಂಡಿಲ್ಲ ಎಂದು ಆರೋಪಿಸಿದ ಕುಟುಂಬ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಳಗಾವಿಯ ಬಿಮ್ಸ್‌ನಲ್ಲಿ ಗರ್ಭಿಣಿ ಮೃತಪಟ್ಟಿದ್ದು, ಆಸ್ಪತ್ರೆಯ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯ ತುರಮುರಿ ಗ್ರಾಮದ ಗರ್ಭಿಣಿ 21 ವರ್ಷದ ಈರಮ್ಮ ಶಿಗೀಹಳ್ಳಿ ಮೃತರು. ಈರಮ್ಮ ಆಸ್ಪತ್ರೆಗೆ ದಾಖಲಾದಾಗಿನಿಂದಲೂ ಯಾರೂ ಆಕೆಯನ್ನು ಬಂದು ನೋಡಿಲ್ಲ. ಸರಿಯಾಗಿ ಚಿಕಿತ್ಸೆ ಕೊಟ್ಟಿಲ್ಲ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಮಧ್ಯರಾತ್ರಿ ಈರಮ್ಮ ಹಾಗೂ ಹೊಟ್ಟೆಯಲ್ಲಿದ್ದ ಹೆಣ್ಣು ಮಗು ಮೃತಪಟ್ಟಿದೆ. ಸಹಿ ಹಾಕಿ ಮೃತದೇಹವನ್ನು ತೆಗೆದುಕೊಂಡು ಹೋಗಿ ಎಂದು ಆಸ್ಪತ್ರೆ ಸಿಬ್ಬಂದಿ ಒತ್ತಾಯಿಸಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ. ಎಪಿಎಂಸಿ ಠಾಣೆಯ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !