ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭ ಹೆಸರುಗಳನ್ನು ತೆಗೆದು ಹಾಕಿರುವುದನ್ನು ಪ್ರಶ್ನಿಸಿ 13 ಜನರ ಗುಂಪು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗಳಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು, ಈ ಅರ್ಜಿಗಳ ವಿಚಾರಣೆ ನಡೆಸಲು ಇದು ಸೂಕ್ತ ಸಮಯವಲ್ಲ. ಈಗಾಗಲೇ ಸ್ಥಾಪಿಸಲಾಗಿರುವ ಮೇಲ್ಮನವಿ ನ್ಯಾಯಮಂಡಳಿಗಳ ಮುಂದೆ ತಮ್ಮ ಅಹವಾಲವನ್ನು ಸಲ್ಲಿಸಬಹುದು ಎಂದು ನಿರ್ದೇಶಿಸಿತು.
ಅರ್ಜಿದಾರರು ಈಗಾಗಲೇ ನ್ಯಾಯಮಂಡಳಿಗಳ ಮುಂದೆ ತಮ್ಮ ಮೇಲ್ಮನವಿಯನ್ನು ಸಲ್ಲಿಸಿದ್ದು, ಆದಾಗ್ಯೂ, ಸುಪ್ರೀಂ ಕೋರ್ಟ್ ಮುಂದೆ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಈ ಅರ್ಜಿಯ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ .
ಬಂಗಾಳ ಮತದಾರರ ಪಟ್ಟಿಯಿಂದ ವ್ಯಕ್ತಿಗಳ ಹೆಸರುಗಳನ್ನು ತೆಗೆದು ಹಾಕಿರುವುದರ ವಿರುದ್ಧದ ಮೇಲ್ಮನವಿಗಳನ್ನು ಪರಿಶೀಲಿಸಲು ಕೋಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರು, ಮಾಜಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತು ಇತರ ನ್ಯಾಯಾಧೀಶರ ನೇತೃತ್ವದಲ್ಲಿ 19 ನ್ಯಾಯಮಂಡಳಿಗಳನ್ನು ಸುಪ್ರೀಂ ಕೋರ್ಟ್ ಸ್ಥಾಪಿಸಿದೆ.



