April 13, 2026
Monday, April 13, 2026
spot_img

ಐಪಿಎಲ್ ನಲ್ಲಿಂದು ರಾಜಸ್ಥಾನ- ಹೈದರಾಬಾದ್ ಮುಖಾಮುಖಿ: ಟಾಸ್ ಗೆದ್ದ ಪರಾಗ್ ಬೌಲಿಂಗ್ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಪರಾಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ರಾಜಸ್ಥಾನ ತಂಡ ಸತತ 4 ಪಂದ್ಯ ಗೆದ್ದು ಪಾಯಿಂಟ್ಸ್ ಟೇಬಲ್ ನಲ್ಲಿ ಅಗ್ರಸ್ಥಾನದಲ್ಲಿದೆ.ಹೈದರಾನಾದ್ ತಂಡ 4 ಪಂದ್ಯಗಳಲ್ಲಿ ಕೇವಲ 1 ಪಂದ್ಯದಲ್ಲಿ ಮಾತ್ರ ಗೆಲುವು ಸಾಧಿಸಿ 3ರಲ್ಲಿ ಸೋಲು ಕಂಡಿದೆ. ಹೀಗಾಗಿ ಮತ್ತೆ ಗೆಲುವಿನ ಹಳಿಗೆ ಮರಳುತ್ತಾ ಎಂಬುದನ್ನ ಕಾದು ನೋಡಬೇಕಿದೆ.

ಸನ್ರೈಸರ್ಸ್ ಹೈದರಾಬಾದ್ ತಂಡ: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ವಿಕೆಟ್ ಕೀಪರ್/ನಾಯಕ), ಹೆನ್ರಿಕ್ ಕ್ಲಾಸೆನ್, ಸಲೀಲ್ ಅರೋರಾ, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಶಿವಂಗ್ ಕುಮಾರ್, ಪ್ರಫುಲ್ ಹಿಂಗೆ, ಇಶಾನ್ ಮಾಲಿಂಗ.

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಲುವಾನ್-ಡ್ರೆ ಪ್ರಿಟೋರಿಯಸ್, ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಂದ್ರೆ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ತುಷಾರ್ ದೇಶಪಾಂಡೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !