ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳದ ಬಿಜೆಪಿ ಕಾರ್ಯಕರ್ತರು ಈ ಬಾರಿ ಮಮತಾ ಆಗಲಿ ಯಾರ ಹಿಂಸಾಚಾರಕ್ಕೆ ಹೆದರುವುದಿಲ್ಲ. ಎಲ್ಲರೂ ಧೈರ್ಯದಿಂದ ಮತದಾನ ಮಾಡಿ ಎಂದು ಕಾರ್ಯಕರ್ತರಿಗೆ ಕೇಂದ್ರ ಸಚಿವ ಅಮಿತ್ ಶಾ ಕರೆ ನೀಡಿದರು.
ದುರ್ಗಾಪುರದ ಬೃಹತ್ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಮಾತನಾಡಿದ ಅವರು, ಬಂಗಾಳದಲ್ಲಿ ಈ ಬಾರಿ ಬದಲಾವಣೆ ನಿಶ್ಚಿತವಾಗಿದ್ದು, ಮಮತಾ ಬ್ಯಾನರ್ಜಿ ಅವರ ಆಡಳಿತ ಅಂತ್ಯವಾಗಲಿದೆ ಎಂದು ಹೇಳಿದರು.
ಈ ಬಾರಿಯ ಫಲಿತಾಂಶದ ನಂತರ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ. ದುರ್ಗಾಪುರದಲ್ಲೂ ಎರಡೂ ಸ್ಥಾನಗಳಲ್ಲಿ ಕಮಲ ಅರಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಬಿಜೆಪಿ ನಾಯಕರು ಹೊರಗಿನವರು ಎಂಬ ಟಿಎಂಸಿ ಆರೋಪಕ್ಕೆ ತಿರುಗೇಟು ನೀಡಿದ ಶಾ, ಬಂಗಾಳದ ಮುಂದಿನ ಮುಖ್ಯಮಂತ್ರಿ ಈ ಮಣ್ಣಿನ ಮಗನೇ ಅಗಲಿದ್ದು, ಬಂಗಾಳಿ ಮಾಧ್ಯಮದಲ್ಲೇ ಓದಿ ಬೆಳೆದ ವ್ಯಕ್ತಿಯೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮೇ 5 ರಂದು ಬಿಜೆಪಿ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಘೋಷಿಸಿದ್ದಾರೆ.



