May 31, 2026
Sunday, May 31, 2026
spot_img

ಪಕ್ಷಕ್ಕೆ ಶಿಸ್ತು ಅನ್ನೋದು ತುಂಬಾ ಮುಖ್ಯ ಆದರೆ ಜಮೀರ್‌ ಅದನ್ನು ಪಾಲನೆ ಮಾಡಿಲ್ಲ: ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಕ್ಷಕ್ಕೆ ಶಿಸ್ತು ಅನ್ನೋದು ತುಂಬಾ ಮುಖ್ಯ. ಆದರೆ ಜಮೀರ್‌ ಅಹಮದ್‌ ಅದನ್ನು ಫಾಲೋ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಯಾವುದೇ ಪಕ್ಷವಾದರೂ ಶಿಸ್ತು ಬಹಳ ಮುಖ್ಯ. ಆದರೆ ಜಮೀರ್ ಅಹ್ಮದ್‌ ಪಕ್ಷದ ಶಿಸ್ತನ್ನು ಪಾಲಿಸಿಲ್ಲ. ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡೇ ಅಭ್ಯರ್ಥಿ ಆಯ್ಕೆ ಮಾಡಿದ್ದೆವು. ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು.

ನಮ್ಮ ನಾಯಕರ ವರದಿಗಳ ಆಧಾರದ ಮೇಲೆ, ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಜೀರ್ ಅಹ್ಮದ್ ವಿಚಾರದಲ್ಲಿ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡಿರುತ್ತಾರೆ ಎಂದು ಹೇಳಿದರು.

ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಹೋಗಿ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುವಂತೆ ಮಾಡಲು ಪಕ್ಷ ಸೂಚಿಸಿತ್ತು. ಅವರು ಈ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅಲ್ಲಿ ಏನಾಗಿದೆ ಎಂದು ನನಗೆ ಇನ್ನು ವರದಿ ಬರಬೇಕಿದೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !